ಬೆಂಗಳೂರು: ಇತ್ತೀಚೆಗೆ ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ರಾಮಯ್ಯ ಅವರು ನಿಧನರಾಗಿದ್ದರು. ಅವರನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸುವಂತೆಯೂ ಸರ್ಕಾರ ಆದೇಶಿಸಿತ್ತು. ಆದರೇ ಮತ್ತೊಂದು ಮಹಾ ಎಡವಟ್ಟು ಎನ್ನುವಂತೆ ಹೀಗೆ ಸಕಲ ಸರ್ಕಾರಿ ಗೌರವಗಳಿಗೆ ತಗುಲಿದಂತ ಖರ್ಚು-ವೆಚ್ಚವನ್ನು ಪಾವತಿಸುವಂತೆ ಮೃತ ರಾಮಯ್ಯ ಕುಟುಂಬಸ್ಥರಿಗೆ ಬಿಲ್ ನೀಡಲಾಗಿದೆ.
ಇಂದು ಎಕ್ಸ್ ನಲ್ಲಿ ಈ ಮಾಹಿತಿ ಹಂಚಿಕೊಂಡಿರುವಂತ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ರಾಮಯ್ಯನವರ ಅಂತ್ಯಸಂಸ್ಕಾರವನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವುದಾಗಿ ಘೋಷಣೆ ಮಾಡಿದ್ದ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಪಾವತಿಸುವಂತೆ ದಿವಂಗತ ರಾಮಯ್ಯನವರ ಕುಟುಂಬಕ್ಕೆ ಬಿಲ್ ಕಳುಹಿಸಿರುವ ಘಟನೆ ನಾಡಿನ ಹಿರಿಯ ಪತ್ರಕರ್ತರಿಗೆ ಮಾಡಿರುವ ಅಪಮಾನದ ಜೊತೆಗೆ ರಾಜ್ಯ ಕಾಂಗ್ರೆಸ್ ಯಾವ ಮಟ್ಟಕ್ಕೆ ದಿವಾಳಿ ಆಗಿದೆ, ಎಷ್ಟು ಲಜ್ಜೆಗೆಟ್ಟ ಸ್ಥಿತಿಗೆ ತಲುಪಿದೆ ಎನ್ನುವುದಕ್ಕೆ ಮತ್ತೊಂದು ತಾಜಾ ಉದಾಹರಣೆಯಾಗಿದೆ ಎಂದಿದ್ದಾರೆ.
ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ, ಶ್ರೀ ರಾಮಯ್ಯನವರ ಅಂತ್ಯಸಂಸ್ಕಾರದ ವೇಳೆ ಗಣ್ಯ ವ್ಯಕ್ತಿಗಳ ಭೇಟಿಗೆ ನಡೆಸಿದ ಸಿದ್ಧತೆಗಳು, ಬ್ಯಾರಿಕೇಡ್ ಅಳವಡಿಕೆ, ಭದ್ರತಾ ವ್ಯವಸ್ಥೆ, ಮತ್ತು ಇತರ ಲಾಜಿಸ್ಟಿಕ್ ಸಿದ್ಧತೆಗಳಿಗೆ ಹಣ ಪಾವತಿಸುವಂತೆ ನಿಮ್ಮ ಪೊಲೀಸ್ ಇಲಾಖೆ ಓರ್ವ ವ್ಯಾಪಾರಿಯ ಮೂಲಕ ರಾಮಯ್ಯನವರ ಕುಟುಂಬಸ್ಥರಿಗೆ ಬಿಲ್ ನೀಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ನಿಜವೇ ಆದರೆ, ನಿಮ್ಮ ಕಾಂಗ್ರೆಸ್ ಸರ್ಕಾರದಂತಹ ಲಜ್ಜೆಗೇಡಿ ಸರ್ಕಾರ ಮತ್ತೊಂದಿಲ್ಲ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ರಾಮಯ್ಯನವರ ಅಂತ್ಯಸಂಸ್ಕಾರವನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವುದಾಗಿ ಘೋಷಣೆ ಮಾಡಿದ್ದ ಸಿಎಂ @siddaramaiah ನೇತೃತ್ವದ ಕಾಂಗ್ರೆಸ್ ಸರ್ಕಾರ, ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಪಾವತಿಸುವಂತೆ ದಿವಂಗತ ರಾಮಯ್ಯನವರ ಕುಟುಂಬಕ್ಕೆ ಬಿಲ್… pic.twitter.com/IbXCVuPZzb
— R. Ashoka (@RAshokaBJP) February 14, 2026
ಪಿ.ರಾಮಯ್ಯಗೆ ಮಾಡಿದ ಅವಮಾನಕ್ಕೆ ಕೆಯುಡಬ್ಲ್ಯೂಜೆ ಖಂಡನೆ
ಹಿರಿಯ ಪತ್ರಕರ್ತರು&ವಿಧಾನ ಪರಿಷತ್ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರಿಗೆ ಸರ್ಕಾರಿ ಗೌರವ ಮೂಲಕ ಅಂತ್ಯಸಂಸ್ಕಾರ ಮಾಡಿದ ಕ್ರಮ ಸ್ವಾಗತಾರ್ಹ. ಆದರೆ ಪೊಲೀಸ್ ಬ್ಯಾರಿಕೆಡ್ ಹಾಕಿದ ಬಿಲ್ ನ್ನು ಪಿ.ರಾಮಯ್ಯ ಅವರ ಮನೆಗೆ ಕಳುಹಿಸಿದ್ದು ಅವಮಾನವೀಯ ಮತ್ತು ಖಂಡನೀಯ ಹಾಗೂ ಹಿರಿಯ ಜೀವಕ್ಕೆ ಮಾಡಿದ ಅವಮಾನ. ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಗ್ರಹಿಸುತ್ತದೆ.
ಶೀಘ್ರವೇ ರಕ್ತದೊತ್ತಡಕ್ಕೆ ಮಾತ್ರೆಗಳಿಂದ ಮುಕ್ತಿ, ಬರಲಿದೆ ಚುಚ್ಚುಮದ್ದು | High Blood Pressure








