ಬೆಂಗಳೂರು:ರಾಜ್ಯ ಸರ್ಕಾರಿ ನೌಕರರ ಮಾದರಿಯಲ್ಲೇ ಕೆಎಸ್ ಆರ್ ಟಿಸಿ ನೌಕರರು ಕೂಡ ಪ್ರತಿ ತಿಂಗಳ ಮೊದಲ ಶನಿವಾರ ಮತ್ತು ಸ್ವಾತಂತ್ರ್ಯ ಹಾಗೂ ಗಣರಾಜ್ಯೋತ್ಸವ ದಿನಗಳಂದು ಸ್ವಯಂ ಪ್ರೇರಿತವಾಗಿ ಖಾದಿ ಉಡುಪು ಧರಿಸುವುದು ಕಡ್ಡಾಯ ಎಂದು ಆದೇಶಿಸಲಾಗಿದೆ.
ರಾಜ್ಯ ಸರ್ಕಾರವು ಸಾರ್ವಜನಿಕ ಸೇವೆಯನ್ನು ಸ್ವಾತಂತ್ರ್ಯ ಹೋರಾಟದೊಂದಿಗೆ ಮರು ಜೋಡಿಸುವ ಉದ್ದೇಶದೊಂದಿಗೆ ಸರ್ಕಾರ ಸರ್ಕಾರಿ, ಅನುದಾನಿತ, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ನೌಕರರು, ಅಧಿಕಾರಿಗಳಿಗೆ ಈ ಹಿಂದೆ ಸೂಚಿಸಿಸಿದೆ.
ಇದೀಗ ಕೆಎಸ್ ಆರ್ ಟಿಸಿಯಲ್ಲೂ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಕೆಎಸ್ ಆರ್ ಟಿಸಿ ನೌಕರರು ಸಮವಸ್ತ್ರ ಧರಿಸುವವರನ್ನು ಹೊರತುಪಡಿಸಿ ಉಳಿದ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ದಿನಗಳಂದು ಸ್ವಯಂ ಪ್ರೇರಿತವಾಗಿ ಖಾದಿ ಉಡುಪು ಧರಿಸಬೇಕು ಎಂದು ತಿಳಿಸಲಾಗಿದೆ.








