ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ಎನ್ನುವಂತೆ, ನಾಳೆಯಿಂದಲೇ ಜಾರಿಗೆ ಬರುವಂತೆ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಲಗೇಜ್ ದರವನ್ನು ಹೆಚ್ಚಳ ಮಾಡಿ ಆದೇಶಿಸಲಾಗಿದೆ.
ಈ ಸಂಬಂಧ ಕೆ ಎಸ್ ಆರ್ ಟಿ ಸಿ ಎಂ.ಡಿ ಅಕ್ರಂ ಪಾಷಾ ಆದೇಶ ಮಾಡಿದ್ದು, ಪ್ರಯಾಣಿಕರ ರಹಿತವಾಗಿ ಸಾಗಿಸುವ ಲಗೇಜ್ ದರದಲ್ಲಿ ಪರಿಷ್ಕರಣೆ ಮಾಡಿದ್ದಾರೆ.
1-5 ಸ್ಟೇಜ್ ವರೆಗೆ 6 ರೂಪಾಯಿ, 6-12 ಸ್ಟೇಜ್ ವರೆಗೆ 12 ರೂಪಾಯಿ, 156 ರಿಂದ 160 ಸ್ಟೇಜ್ ವರೆಗೆ 145 ರೂಪಾಯಿ ಲಗೇಜ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದ್ದಾರೆ.
2021ರಲ್ಲಿ ಪ್ರಯಾಣಿಕ ರಹಿತ ಲಗೇಜ್ ದರ ಏರಿಕೆಯಾಗಿತ್ತು. ಟಿಕೆಟ್ ದರ ಪರಿಷ್ಕರಣೆಯಾದಗ ಲಗೇಜ್ ದರ ಹೆಚ್ಚಿಸಿರಲಿಲ್ಲ. ಹೀಗಾಗಿ ಈಗ ನಾಳೆಯಿಂದ ಜಾರಿಗೆ ಬರುವಂತೆ ಪ್ರಯಾಣಿಕರ ರಹಿತ ಲಗೇಜ್ ದರವನ್ನು ಹೆಚ್ಚಳ ಮಾಡಿ ಕೆ ಎಸ್ ಆರ್ ಟಿ ಸಿ ಎಂ.ಡಿ ಅಕ್ರಂ ಪಾಷಾ ಆದೇಶಿಸಿದ್ದಾರೆ.
ಶಾಸಕ ಭೈರತಿ ಬಸವರಾಜ್ ಮನೆಗೆ ವಿಜಯೇಂದ್ರ ಭೇಟಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ








