ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿಗೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವಂತ ಘಟನೆ ದಾಬಾಸ್ ಪೇಟೆ ಬಳಿಯಲ್ಲಿ ನಡೆದಿದೆ.
ಬೆಂಗಳೂರಿನ ದಾಬಾಸ್ ಪೇಟೆ ಬಳಸಿಯ ಕೆಂಗಲ್ ಕೆಂಪೋಹಳ್ಳಿ ಗೇಟ್ ಬಳಿಯಲ್ಲಿ ಬಿಎಂಟಿಸಿ ಬಸ್ ಬೈಕಿಗೆ ಡಿಕ್ಕಿಯಾದ ಪರಿಣಾಮ, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೇ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಮೃತರ ಬಗ್ಗೆ ವಿವರ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಬಾಂಗ್ಲಾದೇಶದಲ್ಲಿ ನಡೆಯಲಿರುವ ತಾರಿಕ್ ರೆಹಮಾನ್ ಪ್ರಮಾಣವಚನ ಸಮಾರಂಭದಲ್ಲಿ ಓಂ ಬಿರ್ಲಾ ಭಾಗಿ: ಮೂಲಗಳು
ಶಾಸಕ ಭೈರತಿ ಬಸವರಾಜ್ ಮನೆಗೆ ವಿಜಯೇಂದ್ರ ಭೇಟಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ








