ಮಂಗಳೂರು : ಶಾಲಾ ಬಸ್ ಗೆ ಕ್ಯಾಂಟರ್ ಡಿಕ್ಕಿಯಾಗಿ 7 ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಗಳೂರು ಹೊರವಲಯದ ಕಾಪಿಕಾಡು ಬಳಿ ಈ ಒಂದು ಅಪಘಾತ ಸಂಭವಿಸಿದೆ. ಬಸ್ gs ಹಿಂದಿನಿಂದ ಮೀನು ಸಾಗಾಟದ ಕ್ಯಾಂಟರ್ ಡಿಕೆ ಹೊಡೆದಿದೆ. ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲೆಗೆ ಸೇರಿದ ಬಸ್ ನಲ್ಲಿ ಇದ್ದಂತಹ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
ಗೋವಾದಿಂದ ಕ್ಯಾಂಟರ್ ಕೇರಳದ ಕಡೆಗೆ ಹೊರಟಿತ್ತು. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಕ್ಯಾಂಟರ್ ಚಾಲಕ ಸಂಜೀವ್ ನಿದ್ದೆ ಮಂಪರಿನಲ್ಲಿ ಕ್ಯಾಂಟರ್ ಚಲಾಯಿಸುತ್ತಿದ್ದ. ಇವಳೆ ಮುಂದೆ ಇದ್ದ ಶಾಲಾ ಬಸ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








