ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರವಾದ ದುರಂತ ಸಂಭವಿಸಿದ್ದು ಕಟ್ಟಡದ ಮೂರನೇ ಮಹಡಿನ ಬಿದ್ದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಡಿವಿಎಸ್ ವಸತಿ ಶಾಲೆಯ ವಿದ್ಯಾರ್ಥಿ ಕೊಟ್ರೇಶ್ (16) ಆತ್ಮಹತ್ಯೆ ಶರಣಾಗಿರುವ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಶಾಲೆಯಲ್ಲಿ ಈ ಒಂದು ದುರಂತ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿಯಾಗಿರುವ ವಿದ್ಯಾರ್ಥಿ ಕೊಟ್ರೇಶ್, ವಾರ್ಡನ್ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಕೊಟ್ರೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಇದೀಗ ತಿಳಿದು ಬಂದಿದೆ. ಮೃತ ವಿದ್ಯಾರ್ಥಿ ಕೊಟ್ರೇಶ್ ತಂದೆ ಗುರುಲಿಂಗಯ್ಯ ಅವರು ಈ ಆರೋಪ ಮಾಡಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.








