Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಲ್ಲಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಸರ್ಕಾರಿ ಶಾಲೆ ಶಿಕ್ಷಕಿ ದುರ್ಮರಣ!

16/02/2026 2:12 PM

ಭಾರತ- ಅಮೆರಿಕ ವಾಣಿಜ್ಯ ಒಪ್ಪಂದ ರೈತರಿಗೆ ನೀಡಿರುವ ಮರಣ ಶಾಸನವೇ ಸರಿ: ಎಎಪಿ ಮುಖ್ಯಮಂತ್ರಿ ಚಂದ್ರು

16/02/2026 2:11 PM

BREAKING : ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗೆ ಮತ್ತೊಂದು ಬಲಿ : ಬೈಕ್ ನಿಂದ ಕೆಳಗೆ ಬಿದ್ದ ಮಗುವಿನ ಮೇಲೆ ಕಾರು ಹರಿದು ಸಾವು!

16/02/2026 2:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾರತ- ಅಮೆರಿಕ ವಾಣಿಜ್ಯ ಒಪ್ಪಂದ ರೈತರಿಗೆ ನೀಡಿರುವ ಮರಣ ಶಾಸನವೇ ಸರಿ: ಎಎಪಿ ಮುಖ್ಯಮಂತ್ರಿ ಚಂದ್ರು
KARNATAKA

ಭಾರತ- ಅಮೆರಿಕ ವಾಣಿಜ್ಯ ಒಪ್ಪಂದ ರೈತರಿಗೆ ನೀಡಿರುವ ಮರಣ ಶಾಸನವೇ ಸರಿ: ಎಎಪಿ ಮುಖ್ಯಮಂತ್ರಿ ಚಂದ್ರು

By kannadanewsnow0916/02/2026 2:11 PM

ಬೆಂಗಳೂರು: ಭಾರತ- ಅಮೆರಿಕ ವಾಣಿಜ್ಯ ಒಪ್ಪಂದ ರೈತರಿಗೆ ನೀಡಿರುವ ಮರಣ ಶಾಸನವೇ ಸರಿ ಎಂಬುದಾಗಿ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ಆಮ್ ಆದ್ಮಿ ಪಕ್ಷದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ ಭಾರತ ದೇಶವು ಪರಂಪರಾನುಗತವಾಗಿ ಕೃಷಿ ಕ್ಷೇತ್ರವನ್ನು ತನ್ನ ಆರ್ಥಿಕತೆಯ ಬೆನ್ನೆಲುಬಾಗಿ ಕಾಪಾಡಿಕೊಂಡು ಬಂದಿದೆ. ಕೋಟ್ಯಾಂತರ ಸಂಖ್ಯೆಯ ಸಣ್ಣ ಸಣ್ಣ ರೈತರುಗಳು ಇಂದಿಗೂ ಸಹ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅಮೆರಿಕ ದೇಶದ ಒತ್ತಡ ಹಾಗೂ ಹಿತಾಸಕ್ತಿಗೆ ಬಲಿಯಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಎರಡು ದೇಶಗಳ ನಡುವಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕವೆಂದು ಹೇಳುತ್ತಲೇ ಭಾರತೀಯ ರೈತರುಗಳಿಗೆ ಮರಣ ಶಾಸನವನ್ನೇ ಬರೆದುಬಿಟ್ಟಿದ್ದಾರೆ ಎಂದು ತೀವ್ರ ಕಳವಳವನ್ನು ವ್ಯಕ್ತ ಪಡಿಸಿದ್ದಾರೆ.

ಮುಂದುವರೆದು ಮಾತನಾಡುತ್ತಾ ” ಭಾರತದ 145 ಕೋಟಿ ಜನಸಂಖ್ಯೆಯಲ್ಲಿ 85ರಿಂದ 90 ಕೋಟಿ ಜನತೆ ಕೃಷಿ ಚಟುವಟಿಕೆಗಳು ಹಾಗೂ ಕೃಷಿ ಸಂಬಂಧಿತ ಉದ್ಯೋಗಗಳಲ್ಲಿ ತೊಡಗಿಕೊಂಡಿದ್ದಾರೆ. ನಮ್ಮ ರೈತರು ಯಾವುದೇ ಯಾಂತ್ರಿಕೃತ ವ್ಯವಸ್ಥೆಗಳಿಲ್ಲದೆ ಕೃಷಿ ಬದುಕಿನಲ್ಲಿ ತೊಡಗಿಕೊಂಡಿದ್ದಾರೆ. ಆದರೆ ತದ್ವಿರುದ್ಧವಾಗಿ ಅಮೆರಿಕಾ ದೇಶವು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆಗಳಿಂದ ಲಕ್ಷಾಂತರ ಎಕರೆ ಭೂಪ್ರದೇಶಗಳಲ್ಲಿ ಲಕ್ಷಾಂತರ ಬೆಳೆಗಳನ್ನು ಬೆಳೆಯುತ್ತಾರೆ. ಭಾರತದ ರೈತರು ಬೆಳೆಯುವ ಬೇಳೆಕಾಳುಗಳು, ಧಾನ್ಯಗಳು, ಕೆಂಪು ಜೋಳ, ವಿಧಳ ಧಾನ್ಯಗಳು, ಸೋಯಾ, ಹಣ್ಣು ಮತ್ತು ತರಕಾರಿಗಳು ಸೇರಿದಂತೆ ಅನೇಕ ಬೆಳೆಗಳನ್ನು ಇದುವರೆಗೂ ವಿದೇಶಗಳಿಗೆ ರಫ್ತು ಮಾಡುವ ಮೂಲಕ ಉತ್ತಮವಾದ ಬೆಲೆಗಳನ್ನು ನಿರೀಕ್ಷಿಸಬಹುದಾಗಿತ್ತು “

” ಆದರೆ ಮೋದಿ ಹಾಗೂ ಟ್ರಂಪ್ ನಡುವಿನ ಈ ವ್ಯಾಪಾರ ಒಪ್ಪಂದದಲ್ಲಿ ಯಾಂತ್ರಿಕೃತ ವ್ಯವಸ್ಥೆಯಿಂದ ಬೆಳೆದಿರುವ ಅಮೆರಿಕಾ ದೇಶದ ಲಕ್ಷಾಂತರ ಕೃಷಿ ಬೆಳೆಗಳನ್ನು ಭಾರತವು ಶೂನ್ಯ ಅಥವಾ ಕಡಿಮೆ ಸುಂಕದ ರೂಪದಲ್ಲಿ ಮಾರುಕಟ್ಟೆ ಸೃಷ್ಟಿಸಲು ಹೊರಟಿರುವುದು ನಿಜಕ್ಕೂ ರೈತರು ಕಂಗಾಲಾಗಿರುವ ಸಂಗತಿ. ಅಂದಾಜು 45 ಲಕ್ಷ ಕೋಟಿಗು ಹೆಚ್ಚಿನ ಮೊತ್ತದ ಅಮೆರಿಕಾದ ಕೃಷಿ ಬೆಳೆಗಳನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಬೇಕಿದೆ”

” ಭಾರತದ ಬಡ ರೈತರು ಬೆಳೆಯುತ್ತಿರುವ ಕೃಷಿ ಬೆಳೆಗಳನ್ನು ಅಮೆರಿಕ ದೇಶಕ್ಕೆ ರಫ್ತು ಮಾಡಬೇಕಿದ್ದಲ್ಲಿ 18 % ಸುಂಕ ಬೆಚ್ಚವನ್ನು ತೆರಬೇಕಿದೆ. ಇದುವೇ ಭಾರತೀಯ ರೈತರುಗಳಿಗೆ ಮೋದಿಯವರು ನೀಡುತ್ತಿರುವ ಗಲ್ಲು ಶಿಕ್ಷೆ . ಪ್ರಧಾನಿ ನರೇಂದ್ರ ಮೋದಿಯವರು ಯಾವುದೋ ಒತ್ತಡಕ್ಕೆ, ಬಾಹ್ಯ ಹಿತಾಸಕ್ತಿಗೆ ಮಣಿದು ದೇಶದ ರೈತರಿಗೆ ದ್ರೋಹ ಮಾಡುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಚಂದ್ರು ಗುಡುಗಿದರು.

ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ಇದೇ ಸಂದರ್ಭದಲ್ಲಿ ಮಾತನಾಡಿ ಇದೇ ಸಂದರ್ಭದಲ್ಲಿ ಮಾತನಾಡಿ “ಅಮೆರಿಕಾ ದೇಶವು ತನ್ನ ಯಾಂತ್ರಿಕೃತ ಕೃಷಿ ವ್ಯವಸ್ಥೆಯಿಂದ ಬೆಳೆದಿರುವ ಕೃಷಿ ಬೆಳೆಗಳು ತೀರ ಅಗ್ಗ ವಾಗಿರುತ್ತವೆ. ಇವುಗಳನ್ನು ನಮ್ಮ ಭಾರತೀಯ ಮಾರುಕಟ್ಟೆಗಳಿಗೆ ಪರಿಚಯಿಸಿದಾಗ ನಮ್ಮ ರೈತರು ಬೆಳೆದಿರುವ ಬೆಳೆಗಳಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಸಿಗುವುದಿಲ್ಲ. ಮಧ್ಯ ತಯಾರಿಕ ಕಾರ್ಖಾನೆಗಳಿಂದ ಬರುವ ಉಳಿದ ಉತ್ಪನ್ನಗಳನ್ನು ಇದುವರೆಗೂ ಕೋಳಿ, ಕುರಿ, ಮೇಕೆ ಹಸು ಇನ್ನಿತರ ಪ್ರಾಣಿಗಳಿಗೆ ಆಹಾರ ರೂಪದಲ್ಲಿ ನೀಡಲಾಗುತ್ತಿತ್ತು. ಇವುಗಳನ್ನು ಸಹ ಅಮೆರಿಕ ದೇಶದಿಂದ ಆಮದು ಮಾಡಿಕೊಳ್ಳುವುದರಿಂದ ನಮ್ಮ ಕೃಷಿ ವಲಯದ ಆರ್ಥಿಕತೆಗೆ ಸಂಪೂರ್ಣ ಪೆಟ್ಟು ಬೀಳುವುದರಲ್ಲಿ ಯಾವುದೇ ಸಂಶಯವಿಲ್ಲ”

” ನಮ್ಮ ರೈತರಗಳು ಬೆಳೆಯುವ ಸೋಯಾಬೀನ್ ತೈಲದಿಂದ ಇದುವರೆಗೂ ಭಾರತೀಯ ಕಾರ್ಖಾನೆಗಳ ಉತ್ಪನ್ನ ಗಳಿಗೆ ಬಹುಪಾಲು ಪೂರೈಕೆ ಆಗುತ್ತಿತ್ತು. ಆದರೆ ಅಮೆರಿಕದಿಂದ ಆಮದಾಗುವ ಈ ತೈಲದಿಂದ ಬಹುದೊಡ್ಡ ಹೊಡೆತ ಬೀಳಲಿದೆ” ಎಂದು ಸೀತಾರಾಮ ಗುಂಡಪ್ಪ ಆತಂಕ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ.ಸತೀಶ್ ಕುಮಾರ್ ಮಾತನಾಡುತ್ತಾ
” ಭಾರತವು ವೈಮಾನಿಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ಡ್ರೋನ್ಸ್ , ರೇರ್ ಅರ್ಥ್ ಮ್ಯಾಗ್ನೆಟಿಕ್, ಸೋಲಾರ್ ನಂತಹ ಅತ್ಯುತ್ತಮ ಉತ್ಪನ್ನಗಳನ್ನು ತಂತ್ರಜ್ಞಾನದ ಸಮೇತ ಆಮದು ಮಾಡಿಕೊಳ್ಳವುದನ್ನು ಬಿಟ್ಟು ಭಾರತೀಯ ರೈತರುಗಳ ಕೃಷಿ ಉತ್ಪನ್ನಗಳನ್ನು ಅಮೆರಿಕ ದೇಶದಿಂದ ಶೂನ್ಯ ಸುಂಕ ವೆಚ್ಚದಲ್ಲಿ ಭಾರತೀಯ ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವುದು ನಿಜಕ್ಕೂ ಭಾರತೀಯ ರೈತರುಗಳಿಗೆ ಮಾಡಿರುವ ಮರಣ ಶಾಸನವೇ ಸರಿ ” ಎಂದು ಡಾ. ಸತೀಶ್ ಆತಂಕ ವ್ಯಕ್ತಪಡಿಸಿದರು.

” ಆಮ್ ಆದ್ಮಿ ಪಕ್ಷವು ರೈತರೊಂದಿಗೆ ಸದಾ ಕಾಲ ಇದ್ದು ಸಂಯುಕ್ತ ಕಿಸಾನ್ ಮೋರ್ಚಾ ರಾಜ್ಯದಲ್ಲಿ ನಡೆಸುವ ಎಲ್ಲ ಪ್ರತಿಭಟನೆಗಳಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಸಹ ಪಕ್ಷದ ಮುಖಂಡರುಗಳು ಕೇಂದ್ರ ಸರ್ಕಾರದ ಈ ನಡೆಯ ವಿರುದ್ಧ ತೀವ್ರ ಪ್ರತಿಭಟನೆಯನ್ನು ಮಾಡಲಿದ್ದಾರೆ ” ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರುಗಳಾದ ಉಷಾ ಮೋಹನ್,ಅಶೋಕ್ ಮೃತ್ಯುಂಜಯ, ಶಶಿಧರ ಆರಾಧ್ಯ, ಡಾ.ದಿನೇಶ್, ಪುಟ್ಟಣ್ಣ ಗೌಡ, ಪುಷ್ಪ ಕೇಶವ್
ಸೇರಿದಂತೆ ಅನೇಕ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಭಾಗವಹಿಸಿದ್ದರು.

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಸರ್ಕಾರಿ ಶಾಲೆ ಶಿಕ್ಷಕಿ ದುರ್ಮರಣ!

16/02/2026 2:12 PM1 Min Read

BREAKING : ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗೆ ಮತ್ತೊಂದು ಬಲಿ : ಬೈಕ್ ನಿಂದ ಕೆಳಗೆ ಬಿದ್ದ ಮಗುವಿನ ಮೇಲೆ ಕಾರು ಹರಿದು ಸಾವು!

16/02/2026 2:08 PM1 Min Read

BIG NEWS : ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿಯಿಂದ ಚಾಲನೆ!

16/02/2026 2:06 PM1 Min Read
Recent News

BIG NEWS : ಬೆಂಗಳೂರಲ್ಲಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಸರ್ಕಾರಿ ಶಾಲೆ ಶಿಕ್ಷಕಿ ದುರ್ಮರಣ!

16/02/2026 2:12 PM

ಭಾರತ- ಅಮೆರಿಕ ವಾಣಿಜ್ಯ ಒಪ್ಪಂದ ರೈತರಿಗೆ ನೀಡಿರುವ ಮರಣ ಶಾಸನವೇ ಸರಿ: ಎಎಪಿ ಮುಖ್ಯಮಂತ್ರಿ ಚಂದ್ರು

16/02/2026 2:11 PM

BREAKING : ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗೆ ಮತ್ತೊಂದು ಬಲಿ : ಬೈಕ್ ನಿಂದ ಕೆಳಗೆ ಬಿದ್ದ ಮಗುವಿನ ಮೇಲೆ ಕಾರು ಹರಿದು ಸಾವು!

16/02/2026 2:08 PM

BIG NEWS : ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿಯಿಂದ ಚಾಲನೆ!

16/02/2026 2:06 PM
State News
KARNATAKA

BIG NEWS : ಬೆಂಗಳೂರಲ್ಲಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಸರ್ಕಾರಿ ಶಾಲೆ ಶಿಕ್ಷಕಿ ದುರ್ಮರಣ!

By kannadanewsnow0516/02/2026 2:12 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ದಲ್ಲಿ ತೆರಳುತ್ತಿದ್ದ ಶಿಕ್ಷಕಿ ಸಾವನ್ನಪ್ಪಿರುವ ಘಟನೆ…

ಭಾರತ- ಅಮೆರಿಕ ವಾಣಿಜ್ಯ ಒಪ್ಪಂದ ರೈತರಿಗೆ ನೀಡಿರುವ ಮರಣ ಶಾಸನವೇ ಸರಿ: ಎಎಪಿ ಮುಖ್ಯಮಂತ್ರಿ ಚಂದ್ರು

16/02/2026 2:11 PM

BREAKING : ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗೆ ಮತ್ತೊಂದು ಬಲಿ : ಬೈಕ್ ನಿಂದ ಕೆಳಗೆ ಬಿದ್ದ ಮಗುವಿನ ಮೇಲೆ ಕಾರು ಹರಿದು ಸಾವು!

16/02/2026 2:08 PM

BIG NEWS : ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿಯಿಂದ ಚಾಲನೆ!

16/02/2026 2:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.