ಬೆಂಗಳೂರು: ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ.
ಇಂದು ಈ ಕುರಿತಂತೆ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ ಎಸ್ ಕಮಲ್ ಅವರಿದ್ದಂತ ನ್ಯಾಯಪೀಠವು ವಿಚಾರಣೆ ನಡೆಸಿ ಈ ಆದೇಶ ಮಾಡಿದೆ.
ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಅವರು ಅರ್ಜಿ ಸಲ್ಲಿಸಿದ್ದರು. ಆಯ್ಕೆ ಅಸಿಂಧು ಕೋರಿ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿ ಹೈಕೋರ್ಟ್ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶಿಸಿದೆ.
ಚುನಾವಣಾ ಅಕ್ರಮ ಹಿನ್ನಲೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಈ ತೀರ್ಪು ನೀಡಿದೆ.








