ಬೆಂಗಳೂರು : ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರು ಆದೇಶ ಹೊರಡಿಸಿದ್ದಾರೆ.
ಪರಾಜಿತ ಅಭ್ಯರ್ಥಿ ಶ್ರೀಮರಾಜು ಅವರು ಅರ್ಜಿ ಸಲ್ಲಿಸಿದ್ದರು. ಆಯ್ಕೆ ಅಸಿಂಧು ಕೋರಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬಳಿಕ ಹೈಕೋರ್ಟ್ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಎಸ್.ಎನ್. ಸುಬ್ಬಾರೆಡ್ಡಿ ಚುನಾಯಿತರಾಗಿದ್ದರು. ಚುನಾವಣೆಯಲ್ಲಿ ಎಸ್.ಎನ್. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ.
ಜತೆಗೆ ಆಸ್ತಿಗಳ ತೆರಿಗೆ ಪಾವತಿ ಬಾಕಿ ಮಾಹಿತಿಯನ್ನು ಪ್ರಮಾಣಪತ್ರದಲ್ಲಿ ಉಲ್ಲೇಖಿಸಿಲ್ಲ. ಹಾಗಾಗಿ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕೆಂದು ಬಿಜೆಪಿ ಪಕ್ಷದ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.ಆ ಅರ್ಜಿಯನ್ನು ವಜಾಗೊಳಿಸಲು ಎಸ್.ಎನ್. ಸುಬ್ಬಾರೆಡ್ಡಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆ ಗೊಳಿಸಿ ಆದೇಶ ಹೊರಡಿಸಿದೆ.








