ಬೆಂಗಳೂರು : ಇಂದು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಕೋರಲು ಇದೀಗ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೇಶ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದಾರೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ವಿಜಯಲಕ್ಷ್ಮಿ ಮತ್ತು ಪುತ್ರ ವಿನೇಶ್ ಸಹೋದರ ದಿನಕರ್ ತೂಗುದೀಪ್, ನಟ ಧನ್ವಿರ್ ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಜೈಲಿಗೆ ಆಗಮಿಸಿದ್ದು ದರ್ಶನಗೆ 49ನೇ ಹುಟ್ಟುಹಬ್ಬದ ಶುಭಾಶಯಗಳು ಕೋರಲು ಭೇಟಿ ನೀಡಿದ್ದಾರೆ.








