ಬಳ್ಳಾರಿ : ನಟಿ ಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ನಿನ್ನೆ ಭದ್ರತಾ ನೆಪದಲ್ಲಿ ರಚಿತಾ ರಾಮ್ ಕಾರು ಚಾಲಕ, ಜನರನ್ನು ವಾಪಸ್ಸ ಕಳುಹಿಸುತ್ತಿದ್ದ ಈ ವೇಳೆಯಲ್ಲಿ ಅಲ್ಲೇ ಇದ್ದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಅವರನ್ನು ಮೊಣಕೈನಿಂದ ಜೋರಾಗಿ ತಿವಿದು ತಳ್ಳಿದ್ದಾನೆ ಎನ್ನಲಾಗಿದೆ.
ಈ ವೇಳೇ ಅಧಿಕಾರಿ ರವಿಕುಮಾರ್ ಕಣ್ಣಿಗೆ ಗಾಯವಾಗಿದೆ ಎನ್ನಲಾಗಿದೆ. ಸದ್ಯ ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಭದ್ರತೆಯ ನೆಪದಲ್ಲಿ ಸಾರ್ವಜನಿಕರ ಮೇಲೂ ಅಸಭ್ಯ ಹಾಗೂ ಆಕ್ರಮಣಕಾರಿ ವರ್ತನೆ ತೋರಲಾಗಿದೆ ಎಂದು ಸ್ಥಳದಲ್ಲಿದ್ದವರು ಆರೋಪಿಸಿದ್ದಾರೆ.
BREAKING: ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಟಿ ರಶ್ಮಿ ಲೀಲಾ ಇನ್ನಿಲ್ಲ | Actress Rashmi Leela No More








