ಬೆಂಗಳೂರು: ರಾಜ್ಯ ಸರ್ಕಾರ ಹಂಚಿಕೆ ಮಾಡುವಂತ ಸರ್ಕಾರಿ ನಿವೇಶನ, ಮನೆಗಳ ವೇಳೆಯಲ್ಲಿ ಶೇ.5ರಷ್ಟು ಪತ್ರಕರ್ತರಿಗೆ ಮೀಸಲಿಡುವಂತೆ ಸರ್ಕಾರಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಮೂಲಕ ಮನವಿ ಮಾಡಿದೆ.
ಇಂದು ಪತ್ರಕರ್ತರಿಗೆ ಹೌಸಿಂಗ್ ಹೋರ್ಡ್/ನಗರಾಭಿವೃದ್ದಿ ಪ್ರಾಧಿಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಹಂಚಿಕೆ ಮಾಡುವ ನಿವೇಶನ/ಮನೆಗಳಲ್ಲಿ ಶೇ.5ರಷ್ಟು ಮೀಸಲಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ ಮನವಿ ಪತ್ರವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಮತ್ತು ವಸತಿ ಸಚಿವ ವಿಶೇಷಾಧಿಕಾರಿ ಎಸ್.ಲಕ್ಷ್ಮಿನಾರಾಯಣ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ರಾಮನಗರದ ಚೆಲುವರಾಜು ಇದ್ದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ MLC ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ MLC ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ








