ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿದಂತ ಆರೋಪಗಳು ಸುಳ್ಳು ಎಂಬುದಾಗಿ ಕರ್ನಾಟಕ ಹಾಲು ಮಹಾಮಂಡಳಿ(KMF) ಸ್ಪಷ್ಟಪಡಿಸಿದೆ.
ಈ ಕುರಿತಂತೆ ಸಾರ್ವಜನಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ನಂದಿನಿ ಉತ್ಪನ್ನಗಳನ್ನು ಸೇವನೆಗೆ ಅಸುರಕ್ಷಿತವೆಂದು ತಪ್ಪಾಗಿ ಪ್ರಚಾರ ಮಾಡಲಾಗುತ್ತಿದ್ದು, ಬಾಲ್ಯದಿಂದಲೇ ನಂದಿನಿ ಬ್ರಾಂಡ್‌ನೊಂದಿಗೆ ಬೆಳೆದಿರುವ ಕೋಟ್ಯಾಂತರ ಗ್ರಾಹಕರಲ್ಲಿ ಅನಗತ್ಯ ಗೊಂದಲ ಉಂಟುಮಾಡಲಾಗಿದೆ ಎಂದು ತಿಳಿಸಿದೆ.
ಕರ್ನಾಟಕ ಹಾಲು ಮಹಾಮಂಡಳಿಯು (KMF) ಕಾನೂನುಬದ್ಧ ಸಂಸ್ಥೆಗಳು ಹಾಗೂ ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ (FSSAI) ನಿಗದಿಪಡಿಸಿರುವ ಎಲ್ಲಾ ಸುರಕ್ಷತಾ ಮಾನದಂಡಗಳು ಮತ್ತು ಅನುಮೋದಿತ ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದೆ. ನಂದಿನಿ ಹಾಲು ಹಾಗೂ ಹಾಲು ಉತ್ಪನ್ನಗಳೆಲ್ಲವೂ ಸೇವನೆಗೆ ಸಂಪೂರ್ಣ ಸುರಕ್ಷಿತವಾಗಿದ್ದು, ಗ್ರಾಹಕರು ಆತಂಕಪಡಬೇಕಾಗಿಲ್ಲವೆಂದು ಕರ್ನಾಟಕ ಹಾಲು ಮಹಾಮಂಡಳಿಯು ಭರವಸೆಯನ್ನು ನೀಡುತ್ತದೆ ಎಂಬುದಾಗಿ ಹೇಳಿದೆ.
ಕರ್ನಾಟಕ ಹಾಲು ಮಹಾಮ೦ಡಳಿಯು ಆಧಾರರಹಿತ, ತಪ್ಪುದಾರಿಗೆಳೆಯುವ ಮತ್ತು ಬ್ಯಾಂಡ್‌ನ ಮಾನಹಾನಿಕರ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದು, ಇಂತಹ ದುರುದ್ದೇಶಪೂರಿತ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಸ್ಪಷ್ಟ ಪಡಿಸಿದೆ.

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ








