Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾರ್ಮುಜ್‌ ಬಳಿ ಭಾರತೀಯರಿದ್ದ ಹಡಗಿನ ಮೇಲೆ ಅಮೇರಿಕಾ ದಾಳಿ : ಮೂವರು ಭಾರತೀಯರು ಸಾವು!

BIG NEWS : ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸುಂಕ ವಿನಾಯಿತಿ : ಇಂಧನ ದರ ಏರಿಕೆಗೆ ಕೇಂದ್ರದ ಬ್ರೇಕ್

ಆರ್‌ಟಿಐ ಅಡಿ ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಶೀಘ್ರವೇ ತಾಲ್ಲೂಕು ಮಟ್ಟಕ್ಕೂ ‘ಅಕ್ಕಪಡೆ’ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
KARNATAKA

GOOD NEWS: ಶೀಘ್ರವೇ ತಾಲ್ಲೂಕು ಮಟ್ಟಕ್ಕೂ ‘ಅಕ್ಕಪಡೆ’ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

By ವಸಂತ ಬಿ ಈಶ್ವರಗೆರೆ

ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಬೆಳಗಾವಿ ನಗರದ ಹೃದಯ ಭಾಗ ಕಿತ್ತೂರು ಚೆನ್ನಮ್ಮ ಸರ್ಕಲ್‌ನಲ್ಲಿ ಅಕ್ಕಪಡೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸದ್ಯಕ್ಕೆ ಪ್ರಾಯೋಗಿಕವಾಗಿ ಕೆಲವು ಸ್ಥಳಗಳಲ್ಲಿ ಅಕ್ಕಪಡೆ ಆರಂಭಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಂಬರುವ ಬಜೆಟ್‌ನಲ್ಲಿ ಅಂಗೀಕಾರ ಪಡೆದು ತಾಲೂಕು ಮಟ್ಟಕ್ಕೂ ಅಕ್ಕಪಡೆ ವಿಸ್ತರಿಸಲಾಗುವುದು ಎಂದರು.

ಅಕ್ಕಪಡೆ ಎಂದರೆ ಮಹಿಳೆಯರಿಗೆ ಹಾಗೂ ಮಕ್ಕಳ ಪಾಲಿಗೆ ಭರವಸೆ ಇದ್ದಂತೆ. ಜಿಲ್ಲೆಯಾದ್ಯಂತ ಮಹಿಳೆಯರು, ಮಕ್ಕಳು ಸುರಕ್ಷಿತವಾಗಿರಬೇಕು ಎಂಬ ಉದ್ದೇಶದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದೀಗ ಅದರ ಮುಂದುವರಿದ ಭಾಗವಾಗಿ ಅಕ್ಕಪಡೆಯನ್ನು ರಚಿಸಲಾಗಿದೆ ಎಂದು ಸಚಿವರು ಹೇಳಿದರು.

ಅಕ್ಕಪಡೆ ಸಿಬ್ಬಂದಿ ಸಾರ್ವಜನಿಕ ಸ್ಥಳಗಳಾದ ಮಾಲ್‌, ಜಾತ್ರಾ ಮಹೋತ್ಸವ, ಲೇಡಿಸ್‌ ಹಾಸ್ಟೆಲ್‌ಗಳು, ಕಾಲೇಜುಗಳು, ಸಮುದಾಯ ಭವನ ಸೇರಿದಂತೆ ಜನನಿಬೀಡ ಪ್ರದೇಶಗಳಿಗೆ ಭೇಟಿ ಕೊಡಲಿದ್ದಾರೆ. ಅಕ್ಕಪಡೆಯ ಉದ್ದೇಶ ಸಫಲವಾಗಬೇಕು ಎಂದರೆ ನಾಗರಿಕ ಸಮಾಜ ಕೂಡ ಇದಕ್ಕೆ ಬೆಂಬಲ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕರೆ ನೀಡಿದರು.

ಬೇರು ಮಟ್ಟದಿಂದಲೇ ಬಾಲ್ಯವಿವಾಹವನ್ನು ತಡೆಗಟ್ಟುವುದೇ ಅಕ್ಕಪಡೆ ಉದ್ದೇಶ, ಜೊತೆಗೆ ಬಾಲ ಗರ್ಭಿಣಿ, ಪೋಕ್ಸೋ ಕೇಸ್‌ಗಳನ್ನು ಕಿತ್ತುಹಾಕಬೇಕು. ಮಹಿಳೆಯರು ನಿರ್ಭಿತಿಯಿಂದ ಓಡಾಡಬೇಕು ಎಂಬುದೇ ಅಕ್ಕಪಡೆ ಉದ್ದೇಶ ಎಂದು ಹೇಳಿದರು.

ಅಕ್ಕಪಡೆ ಎಂದರೆ ಆಸರೆ, ಶಕ್ತಿ, ಸ್ವಾಭಿಮಾನ, ನಾಗರಿಕ ಸಮಾಜದಲ್ಲಿ ಎಲ್ಲರೂ ಕೂಡ ನ್ಯಾಯಯುತವಾಗಿ ನಡೆದುಕೊಳ್ಳಬೇಕು, ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ದೌರ್ಜನ್ಯಕ್ಕೊಳಗಾಗಿ ದೂರು ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದರು.

ಮಕ್ಕಳ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ದಿನದ 24 ಗಂಟೆಯೂ ಸಹಾಯವಾಣಿಗಳನ್ನು ತೆರೆಯಲಾಗಿದೆ. ನಮ್ಮ ಇಲಾಖೆಯಿಂದ ಸಹಾಯವಾಣಿ ತೆರೆಯಲಾಗಿದ್ದು, 1098 ಸಂಖ್ಯೆಗೆ ಕರೆ ಮಾಡಬಹುದು. ಅಕ್ಕ ಪಡೆಗೆ ಮಹಿಳಾ ಸಹಾಯವಾಣಿ 181, ಜೊತೆಗೆ ಪೊಲೀಸ್‌ ಇಲಾಖೆಯ 112 ಸಂಖ್ಯೆಗೆ ಕರೆ ಮಾಡಬಹುದು. ಸಾರ್ವಜನಿಕ ಸ್ಥಳಗಳಲ್ಲಿ ಸಹಾಯವಾಣಿ ಸಂಖ್ಯೆಗಳನ್ನು ಅಂಟಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಸಹಾಯವಾಣಿಯನ್ನು ಹೆಣ್ಣುಮಕ್ಕಳು ಸೂಕ್ತರೀತಿಯಲ್ಲಿ ಬಳಸಿಕೊಳ್ಳಬೇಕು, ನಿಮ್ಮ ಮನೆಗಳಲ್ಲಿ ತೊಂದರೆ ಅನುಭವಿಸುತ್ತಿದ್ದರೂ ಸಹಾಯವಾಣಿ ಮೂಲಕ ಅಕ್ಕಪಡೆಯನ್ನು ಸಂಪರ್ಕಿಸಬಹುದು. ಸಂಕಷ್ಟದಲ್ಲಿರುವವರಿಗೆ ಆಸರೆ ನೀಡಲು ಅಕ್ಕಪಡೆ ಎಲ್ಲರ ಜೊತೆಗೆ ಕೈಜೋಡಿಸಲಿದೆ ಎಂದು ಸಚಿವರು ತಿಳಿಸಿದರು.

ಇದೇ ವೇಳೆ ರಾಜ್ಯ ಅಕ್ಕಪಡೆಯ ಸಂಯೋಜಕರಾದ ಶ್ರೀಮತಿ ಸೈನಿ ನೇತೃತ್ವದ ಬೀದರ್ ಜಿಲ್ಲೆಯ ಅಕ್ಕಪಡೆಯ ವತಿಯಿಂದ ಆತ್ಮರಕ್ಷಣೆಯ ಕುರಿತು ಸಾಹಸ ಪ್ರದರ್ಶನ ನೋಡುಗರ ಗಮನ ಸೆಳೆಯಿತು‌.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಆಯುಕ್ತರಾದ ಭೂಷಣ್ ಗುಲಾಬರಾವ್ ಬೋರಸೆ, ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್, ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ಚೇತನಕುಮಾರ್ ಎಂ.ಎನ್, ಸಚಿವರ ಮಾಧ್ಯಮ ಸಲಹೆಗಾರ ಎಂ.ಕೆ.ಹೆಗಡೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಮಿತ್ರಾ, ಇಲಾಖೆಯ ನಿರೂಪಣಾಧಿಕಾರಿ ಅನಿಲಕುಮಾರ್ ಹೆಗ್ಡೆ ಸೇರಿದಂತೆ ಗೃಹರಕ್ಷಕಿಯರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸಲ್ಲಿ ಗೌಪ್ಯತೆ ಕಾಪಾಡುವುದು ಕಡ್ಡಾಯ: DG & IGP ಖಡಕ್ ಆದೇಶ

Share. Facebook Twitter LinkedIn WhatsApp Email

Related Posts

ಆರ್‌ಟಿಐ ಅಡಿ ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

2 Mins Read

SHOCKING : ಚಿಕ್ಕಮಗಳೂರಲ್ಲಿ ಬ್ಲ್ಯಾಕ್​ಮೇಲ್ ಮಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ನಾಲ್ವರು ಕಾಮುಕರು ಅರೆಸ್ಟ್!

1 Min Read

GOOD NEWS : ಕೇವಲ ₹3 ಲಕ್ಷ ಹೂಡಿಕೆ ಮಾಡಿ ಆರಂಭಿಸಿ ಈ ಬಿಸಿನೆಸ್; ತಿಂಗಳಿಗೆ ₹2-3 ಲಕ್ಷ ಲಾಭ ಗಳಿಸುವ ಸುವರ್ಣ ಅವಕಾಶ!

2 Mins Read
Recent News

BREAKING : ಹಾರ್ಮುಜ್‌ ಬಳಿ ಭಾರತೀಯರಿದ್ದ ಹಡಗಿನ ಮೇಲೆ ಅಮೇರಿಕಾ ದಾಳಿ : ಮೂವರು ಭಾರತೀಯರು ಸಾವು!

BIG NEWS : ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸುಂಕ ವಿನಾಯಿತಿ : ಇಂಧನ ದರ ಏರಿಕೆಗೆ ಕೇಂದ್ರದ ಬ್ರೇಕ್

ಆರ್‌ಟಿಐ ಅಡಿ ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

SHOCKING : ಚಿಕ್ಕಮಗಳೂರಲ್ಲಿ ಬ್ಲ್ಯಾಕ್​ಮೇಲ್ ಮಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ನಾಲ್ವರು ಕಾಮುಕರು ಅರೆಸ್ಟ್!

State News
KARNATAKA

ಆರ್‌ಟಿಐ ಅಡಿ ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

By ಸುರೇಶ್‌ KARNATAKA 2 Mins Read

ಬೆಂಗಳೂರು: ಆರೋಪಗಳು ಎಷ್ಟೇ ಗಂಭೀರವಾಗಿದ್ದರೂ ಸಹ ವ್ಯಕ್ತಿಯೊಬ್ಬರ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕ ಮಾಹಿತಿಯಾಗಿ ಪರಿವರ್ತಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್…

SHOCKING : ಚಿಕ್ಕಮಗಳೂರಲ್ಲಿ ಬ್ಲ್ಯಾಕ್​ಮೇಲ್ ಮಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ನಾಲ್ವರು ಕಾಮುಕರು ಅರೆಸ್ಟ್!

GOOD NEWS : ಕೇವಲ ₹3 ಲಕ್ಷ ಹೂಡಿಕೆ ಮಾಡಿ ಆರಂಭಿಸಿ ಈ ಬಿಸಿನೆಸ್; ತಿಂಗಳಿಗೆ ₹2-3 ಲಕ್ಷ ಲಾಭ ಗಳಿಸುವ ಸುವರ್ಣ ಅವಕಾಶ!

ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.