ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಇಂದು ಮನೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಯ ಯಾಸೀನ್ ಸೇರಿದಂತೆ ಆರು ಆರೋಪಿಗಳನ್ನು ಪೊಲೀಸರು ನಿನ್ನೆ ಬಂಧಿಸಿದ್ದರು.ಅಪ್ರಾಪ್ತ ಬಾಲಕರು ಸೇರಿದಂತೆ ಬಸವನಹಳ್ಳಿ ಪೊಲೀಸರು 6 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು.
ರಾತ್ರಿ ಚಿಕ್ಕಮಂಗಳೂರಿನ ಜಡ್ಜ್ ನಿವಾಸದಲ್ಲಿ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಜಡ್ಜ್ ನಿವಾಸದಲ್ಲಿ ಆರು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಜಡ್ಜ್ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ನಾಲ್ವರು ಅಪರಾಪ್ತರನ್ನು ಹಾಸನದ ರಿಮೈಂಡ್ ಹೋಂ ಗೆ ಶಿಫ್ಟ್ ಮಾಡಲಾಗಿದೆ ಸುಧಾ ಎಂಬವರ ಮನೆಯ ಮೇಲೆ ಆರೋಪಿಗಳು ಕಲ್ಲುತೂರಾಟ ನಡೆಸಿದರು ಸುಧಾ ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು ವಿಜಯಪುರ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿತ್ತು.








