ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯದೇವನಹಳ್ಳಿ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಡಿ ವೈ ಎಸ್ ಬಿ ಗಿರೀಶ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.
ಸರ್ವೆ ಇಲಾಖೆಯ ರೆಕಾರ್ಡ್ ನೀಡುವ ಕಚೇರಿಯ ಬಗ್ಗೆ ಹಲವು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ದಾಖಲೆಗಳನ್ನು ಪಡೆದು ತಹಶೀಲ್ದಾರ ಸಮ್ಮುಖದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು ಸರಿಯಾದ ಸಮಯಕ್ಕೆ ಬಾರದ ಅಧಿಕಾರಿಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ತಾಲೂಕು ಕಚರಿಯ ಎಲ್ಲಾ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದರು.








