ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರಕ್ಕಿಂತಲೂ ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚಿನ ಕಮಿಷನ್ ಕೊಡಬೇಕಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್ ಮಂಜುನಾಥ್ ಗಂಭೀರವಾಗಿ ಆರೋಪಿಸಿದ್ದಾರೆ.
ಹಿಂದೆ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರನ್ನು ಬಳಸಿಕೊಂಡು ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರು. ಈಗ ಹಳೆಯ ಸರ್ಕಾರಕ್ಕಿಂತ ಹೆಚ್ಚು ಕಮಿಷನ್ ಕೊಡುವ ಪರಿಸ್ಥಿತಿ ಇದೆ. ಸರ್ಕಾರದಿಂದ ಬರೋಬ್ಬರಿ 37 ಸಾವಿರ ಕೋಟಿ ಬರಬೇಕಿದೆ. ಹಳೆಯ ಬಿಲ್ ಗಳಿಗೆ ಕಮಿಷನ್ ಪಡೆದೆ ಹಣ ಬಿಡುಗಡೆ ಮಾಡುತ್ತಿದ್ದಾರೆ. ನಗರಾಭಿವೃದ್ಧಿ ಇಲಾಖೆಯಲ್ಲಿ ಮಧ್ಯವರ್ತಿಗಳ ಮೂಲಕ ಕೆಲಸ ಆಗುತ್ತದೆ.
ತಮಗೆ ಬೇಕಾದವರಿಗೆ ಟೆಂಡರ್ ಕೊಡುತ್ತಿದ್ದಾರೆ.ಇಂಜಿನಿಯರ್ ಗಳ ಖಾಸಗಿ ಕಚೇರಿಗೆ ಕರೆಸಿಕೊಂಡು ಟೆಂಡರ್ ಕೊಡುತ್ತಿದ್ದಾರೆ. ಇಂತಹವರನ್ನು ಸಿಎಂ ಸಿದ್ದರಾಮಯ್ಯ ಹೇಗೆ ಸಹಿಸಿಕೊಂಡಿದ್ದಾರೆ ಎನ್ನುವುದು ದೇವರಿಗೆ ಗೊತ್ತು. ಇದ್ದಿದ್ದರಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕಷ್ಟಕ್ಕೆ ಸ್ಪಂದಿಸುತ್ತಾರೆ ಎಂದು ತಿಳಿಸಿದರು.








