ಮೈಸೂರು : ಮೈಸೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ದುರ್ಮರಣ ಹೊಂದಿದ್ದಾನೆ. ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ 22 ವರ್ಷದ ಪ್ರವೀಣ್ ಮೃತ ಯುವಕ ಎಂದು ತಿಳಿದುಬಂದಿದೆ.
ಸ್ಥಳೀಯರ ಮೊಬೈಲ್ ನಲ್ಲಿ ಈ ಒಂದು ದೃಶ್ಯ ಸೆರೆಯಾಗಿದೆ. ಗ್ರಾಮದಲ್ಲಿ ಬಂಡರಸಮ್ಮ ಹಬ್ಬದ ಉತ್ಸವ ನಡೆಯುತ್ತಿತ್ತು ಈ ವೇಳೆ ಪ್ರವೀಣ್ ಬಂಡಿ ಓಡಿಸುತ್ತಿದ್ದ. ಈ ವೇಳೆ ಬಂಡೆ ಆಯತಪ್ಪಿ ಕೆಳಗೆ ಬಿದ್ದ ಪ್ರವೀಣ್ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣವೇ ಆತನನ್ನು ಜಿಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದ. ಇಂದು ಚಿಕಿತ್ಸೆ ಫಲಕಾರಿಯಾಗದೆ ಇಂದು ಪ್ರವೀಣ್ ಸಾವನ್ನಪ್ಪಿದ್ದಾನೆ.








