ಬೆಳಗಾವಿ: ಜಿಲ್ಲೆಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿ ತೆರಳುತ್ತಿದ್ದಂತ ದಂಪತಿಗಳು, ಅವರ ಪುತ್ರಿ ಸ್ಥಳದಲ್ಲೇ ಸಾವನ್ನಪ್ಪಿರುವಂತ ಭೀಕರ ಅಪಘಾತ ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಆಲಖನೂರು ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಅಪಘಾತದಲ್ಲಿ ಗೀರೆಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ, ಪುತ್ರಿ ಆರಾಧ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
BIG NEWS: ಕಸದ ಟೆಂಡರ್, ಬಿಲ್ ಮಂಜೂರಾತಿ, ಸ್ಪೆಷಲ್ ಎಲ್ಒಸಿಗೆ ಶೇ.7% ಕಮೀಷನ್ ಕೊಡ್ಬೇಕು: ಆರ್.ಅಶೋಕ್ ಗಂಭೀರ ಆರೋಪ








