ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಿದ್ದು, 2026ರ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗೆ ದಿನಾಂಕ 21-02-2026ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ ಎಂದಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-03-2026 ಆಗಿದೆ. ಅರ್ಜಿ ಶುಲ್ಕ ಪಾವಲತಿಸಲು ಕೊನೆಯ ದಿನಾಂಕ 23-03-2026 ಆಗಿದೆ. ಇಲಾಖಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್ http://www.kpsc.kar.nic.in ಭೇಟಿ ನೀಡುವಂತೆ ತಿಳಿಸಿದೆ.
ಸರ್ಕಾರಿ ನೌಕರರು, ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳು, ವಿವಿ, ಪ್ರಾಧಿಕಾರಗಳ ಖಾಯಂ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಗ್ರೂಪ್-ಡಿ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದಿದೆ.
ರಣಜಿ ಟ್ರೋಫಿಯಲ್ಲಿ ಇತಿಹಾಸ ಸೃಷ್ಠಿಸಿದ ಜಮ್ಮು-ಕಾಶ್ಮೀರ: 67 ವರ್ಷದ ಬಳಿಕ ಫೈನಲ್ ಗೆ ಲಗ್ಗೆ | Ranji Trophy
ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್








