ಶಿವಮೊಗ್ಗ : ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ಮಹೋತ್ಸವ ನಡೆಯಲಿದೆ. ಈ ಜಾತ್ರೆಯ ವೇಳೆಯಲ್ಲಿ ಬೆತ್ತಲೆ ಸೇವೆಯನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಇಂದು ಆದೇಶ ಹೊರಡಿಸಿರುವಂತ ಅವರು, ಸೊರಬದ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ 2 ದಿನಗಳ ಕಾಲ ಬೆತ್ತಲೆ ಸೇವೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಆದೇಶಿಸಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರನ್ವಯ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು ‘ಬೆತ್ತಲೆ ಸೇವೆ’ ಯನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ. ಈ ನಿಷೇಧಾಜ್ಞೆಯು ಶ್ರೀ ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲವೆಂದು ತಿಳಿಸಿದ್ದಾರೆ.
BREAKING: ರಾಜ್ಯದಲ್ಲಿ ಮತ್ತೆ ಹಂತ ಹಂತವಾಗಿ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ
ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್
ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ








