ಜನವರಿ 2027ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 7 2026(ಭಾನುವಾರ) ರಂದು ನಡೆಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ 2027ರ ಜನವರಿ 1 ರಂತೆ ಹನ್ನೊಂದೂವರೆ ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ: 2-1-2014 ರಿಂದ 1-7-2015 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಈ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.
ಅರ್ಜಿ ನಮೂನೆ, ಪ್ರಾಸ್ಪೆಕ್ಟಸ್ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ, ಉತ್ತರಾಖಂಡ್, ಪಿನ್-248003 ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಏಪ್ರಿಲ್ 5 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು-25 ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ : 080-25589459 ಗೆ ಸಂಪರ್ಕಿಸಬಹುದು ಎಂದು ಬಾಗಲಕೋಟೆಯ ನವನಗರದ ಸೈನಿಕ ಕಲ್ಯಾಣ ಮತ್ತು ಪುನರ್ವವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








