ಬೆಂಗಳೂರು : ಪತ್ನಿಯ ಶೀಲ ಶಂಕಿಸಿ ಚಾಕುವಿನಿಂದ ಇರಿದು ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಯಾರಬ್ ನಗರದಲ್ಲಿ ಈ ಒಂದು ಘಟನೆ ನಡೆದಿದೆ ಸಲ್ಮಾನ್ ಕೊಲೆ ಮಾಡಿದ್ದಾನೆ.
ಕೌಟುಂಬಿಕ ಕಲಹ ಮತ್ತು ಅನೈತಿಕ ಸಂಬಂಧದ ಅನುಮಾನದ ಹಿನ್ನೆಲೆಯಲ್ಲಿ ಸಲ್ಮಾನ್ ಸೋಫಿಯಾಳನ್ನು ಕೊಲೆ ಮಾಡಿದ್ದಾನೆ. ಅನೈತಿಕ ಸಂಬಂಧದ ವಿಚಾರವಾಗಿ ಕುಟುಂಬದಲ್ಲಿ ಆಗಾಗ ಗಲಾಟೆ ನಡೆಯುತ್ತಿತ್ತು. ಅನುಮಾನದ ಭೂತ ಕೂಡ ಈತನನ್ನು ಹೊಕ್ಕಿತ್ತು. ಹಾಗಾಗಿ ಪತ್ನಿಯ ಶೀಲದ ಕುರಿತು ಶಂಕಿಸಿ ತಾನೇ ಕೊಲೆ ಮಾಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.







