ಮೈಸೂರು : ಇಂದಿನಿಂದ ನಾಗರಹೊಳೆ ಮತ್ತು ಬಂಡಿಪುರದಲ್ಲಿ ಸಫಾರಿಗೆ ಅವಕಾಶ ಮಾಡಿಕೊಡಲಾಗಿದ್ದು ಸಫಾರಿ ಆರಂಭ ವಿರೋಧಿಸಿ ರೈತರು ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಕಚೇರಿ ಮುತ್ತಿಗೆಗೆ ರೈತರು ಯತ್ನಿಸಿದ್ದಾರೆ.
ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿಗೆ ರೈತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ, ಈ ವೇಳೆ ಪೊಲೀಸರು ರೈತರನ್ನು ತಡೆದು ನಿಲ್ಲಿಸಿದ್ದಾರೆ. ಆಗ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.








