ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, 2 ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಹಾಸನದ ಗುಡ್ಡೆನಹಳ್ಳಿ ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ನಡೆದಿದೆ.
ಮೃತ ಯುವಕರನ್ನು ಗುಡ್ಡೆನಹಳ್ಳಿ ರಾಕೇಶ್ (29) ಹಾಗೂ ಮಯೂರ (24) ಅಪಘಾತದಲ್ಲಿ ಸಾವನಪ್ಪಿದ್ದಾರೆ. ಮಕ್ಕಳನ್ನು ಕಳೆದುಕೊಂಡು ಪೋಷಕರು ಗೋಳಾಡುತ್ತಿದ್ದಾರೆ ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








