Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ
KARNATAKA

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

By kannadanewsnow5720/02/2026 7:25 AM

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ: ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಜಮೀನು ಮಂಜೂರು ಆಗಿ ಪೋಡಿ ಆಗದೇ ಪ್ರತ್ಯೇಕ ಪಹಣಿ ಬರದೇ ಇರುವುದರಿಂದ ಅಂತಹವುಗಳನ್ನು ಗೈರು ವಿಲೇ ಕಡತವನ್ನು ಮಾಡಲಾಗಿದ್ದು, ಸುಮಾರು 4000 ಜನರಿಗೆ ಈ ಗೈರು ವಿಲೇ ಕಡತವನ್ನು ನೀಡಲಾಗಿದೆ. ರಾಜ್ಯದಲ್ಲಿ ನಮ್ಮ ಜಿಲ್ಲೆಯೂ 3ನೇ ಸ್ಥಾನವನ್ನು ಹೊಂದಲಾಗಿದೆ ಎಂದರು.

ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ನಿವಾರಿಸಿ ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯನ್ನು ಜಿಲ್ಲಾಡಳಿತದಿಂದ ಬಿಗಿ ಬಂದೋಬಸ್ತ್, ಸಿಸಿಟಿವಿ ಲೈವ್ ವೆಬ್‌ಕಾಸ್ಟಿಂಗ್ ಮೂಲಕ ನಡೆಸಲಾಗುತ್ತದೆ. ಜಿಲ್ಲೆಯಲ್ಲಿರುವ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಖಜಾನೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಅತ್ಯಂತ ಸುರಕ್ಷಿತವಾಗಿ ಇರಿಸಲು ಸಿಸಿಟಿವಿ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪರೀಕ್ಷಾ ಚಟುವಟಿಕೆಗಳ ಲೈವ್ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಥಾಪಿಸಲಾಗಿರುವ ಕಮಾಂಡ್ ಸೆಂಟರ್ ಮೂಲಕ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳು ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ನಡೆಯುವ ಚಟುವಟಿಕೆಗಳನ್ನು ನೇರವಾಗಿ ವೀಕ್ಷಿಸಲಿದ್ದಾರೆ.

ಫ್ಲೆಕ್ಸ್ ಹಾವಳಿ ವಿರುದ್ಧ ಕಠಿಣ ಕ್ರಮ: ದುರ್ಗಾಂಬಿಕಾ ಜಾತ್ರೆಯ ಸಂದರ್ಭದಲ್ಲಿ ನಗರದ ಪರಿಸರ ಮಾಲಿನ್ಯಕ್ಕೆ ಧಕ್ಕೆ ತರುವಂತೆ ಅನಧಿಕೃತ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ‘ಡಿ ಫಿಗರ್‌ಮೆಂಟ್ ಆಕ್ಟ್’ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಎಫ್‌ಐಆರ್ ದಾಖಲಿಸಲಾಗುವುದು. ಜೊತೆಗೆ ಪ್ಲಾಸ್ಟಿಕ್ ಫ್ಲೆಕ್ಸ್ ಮುದ್ರಿಸುವ ಪ್ರಿಂರ್ಸ್ಗದಳ ಮೇಲೆಯೂ ಕಠಿಣ ಕ್ರಮ ಜರುಗಿಸಲಾಗುವುದು. ಜಾತ್ರೆಯಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸಲು ಸಾರ್ವಜನಿಕರು ಸಹಕರಿಸಬೇಕು ಎಂದರು.

2026ರ ಡಿಜಿಟಲ್ ಜನಗಣತಿ: 2026ರ ಜನಗಣತಿ ಪ್ರಕ್ರಿಯೆ ಏಪ್ರಿಲ್ 1 ರಿಂದ ಆರಂಭವಾಗಲಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ಸ್ವಯಂ ದೃಢೀಕರಣ ಮಾಡಿಕೊಳ್ಳಲು ಅವಕಾಶವಿದೆ ಎಂದರು.

ಭದ್ರಾ ನಾಲೆ ನೀರು ನಿರ್ವಹಣೆ: ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಕನ್ನಡ ಭವನ ನಿರ್ಮಾಣ: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

Pauti Andolana to change the names of deceased farmers to the names of their heirs
Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.