ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ.
ಹೌದು, ನಿನ್ನೆ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಯತ್ನಾಳ್ ಭೇಟಿಯಾಗಿದ್ದು, 20 ನಿಮಿಷಗಳ ಕಾಲ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ.
ನಿನ್ನೆ ಬೆಂಗಳೂರಿನ ಖಾಸಗಿ ಕಾರ್ಯಕ್ರಮದಲ್ಲಿ ಇಬ್ಬರು ನಾಯಕರು ಭಾಗಿಯಾಗಿದ್ದರು. ಈ ವೇಳೆ ಕುಮಾರಸ್ವಾಮಿ ಮತ್ತು ಯತ್ನಾಳ್ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.








