ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-3ಬಿ ನಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಲ್ಲಿ ಸೌಲಭ್ಯಕ್ಕಾಗಿ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು ಬ್ಯಾಂಕುಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ.
ನಗರ ಪ್ರದೇಶದ ವಿಧಾನ ಸಭಾಕ್ಷೇತ್ರಗಳಾದ ಧಾರವಾಡ, ನವಲಗುಂದ, ಕುಂದಗೋಳ, ಕಲಘಟಗಿ, ಹುಬ್ಬಳ್ಳಿ-ಧಾ ಪೂರ್ವ, ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ಗಕಳಲ್ಲಿ ಯೋಜನೆಯ ಸೌಲಭ್ಯ ಪಡೆಯಬಯಸುವವರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು.
ವೀರಶೈವ ಲಿಂಗಾಯತ ಸಮುದಾಯದ ಅರ್ಜಿದಾರರು ಮಾರ್ಚ 06, 2026 ರೊಳಗಾಗಿ ಸೇವಾಸಿಂಧು ಪೆÇೀರ್ಟಲ್ ಗ್ರಾಮಒನ್, ಕರ್ನಾಟಕ ಒನ್ಗುಳ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ದೂರವಾಣಿ ಸಂಖ್ಯೆ: 0836-2957829 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








