ಬೆಂಗಳೂರು : ನಿನ್ನೆ ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಲಾಗಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ಎಸ್ಪಿ ಸಿದ್ದಾರ್ಥ್ ಮಾಹಿತಿ ನೀಡಿದ್ದು ಇದುವರೆಗೂ 8 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಆರೋಪಿಗಳ ವಿರುದ್ಧ ಸುಮಟೊ ಕೇಸ್ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ ಇನ್ನು ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ ಎಂದು ಕಿಡಿ ಕಾರಿದ್ದಾರೆ.
ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು, ಚಪ್ಪಲಿ ತೂರಾಟದ ಪುಂಡಾಟಿಕೆ ನಡೆದಿರುವುದು ಅತ್ಯಂತ ಖಂಡನೀಯ ಹಾಗೂ ಹೇಯ ಕೃತ್ಯ. ಈ ಓಲೈಕೆ ದುರಾಡಳಿತದ, ತುಘಲಕ್ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ. ಪೊಲೀಸರ ಉಪಸ್ಥಿತಿಯಲ್ಲಿಯೇ ಕಲ್ಲು ತೂರಾಟ ನಡೆದರೆ, ಇನ್ನು ರಾಜ್ಯದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ?
ಈ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಿಂದೂಗಳ ಹಬ್ಬ ಮತ್ತು ಮೆರವಣಿಗೆಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಇಂತಹ ನಿರಂತರ ದಾಳಿಗಳು ವ್ಯವಸ್ಥಿತ ಪಿತೂರಿಯಂತೆ ಕಾಣುತ್ತಿದೆ. ರಾಜ್ಯ ಸರ್ಕಾರ ತಮ್ಮ ಪರ ನಿಲ್ಲಲಿದೆ ಎನ್ನುವ ಧೈರ್ಯವಿಲ್ಲದೆ ಇಂತಹ ಪುಂಡಾಟಿಕೆ ನಡೆಯುವುದು ಸಾಧ್ಯವಿಲ್ಲ. ಈಗಲಾದರೂ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಸರ್ಕಾರ ತನ್ನ ಓಲೈಕೆ ರಾಜಕೀಯವನ್ನು ಬಿಟ್ಟು, ರಾಷ್ಟ್ರದ ಅಸ್ಮಿತೆಯಾಗಿರುವ ಶಿವಾಜಿ ಮಹಾರಾಜರ ಗೌರವಕ್ಕೆ ಧಕ್ಕೆ ತಂದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಮಾನ್ಯ ಮುಖ್ಯಮಂತ್ರಿಗಳೇ, ಹಿಂದೂ ಸಮಾಜದ ತಾಳ್ಮೆಯನ್ನು ಪರೀಕ್ಷಿಸಬೇಡಿ. ನಮ್ಮ ಆರಾಧ್ಯ ಪುರುಷರ, ನಾಡಿನ ಅಸ್ಮಿತೆಯ ವಿಷಯದಲ್ಲಿ ಸುಮ್ಮನಿರುವ ಪ್ರಶ್ನೆಯೇ ಇಲ್ಲ ಎಂದು ಕಿಡಿ ಕಾರಿದ್ದಾರೆ.
ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು, ಚಪ್ಪಲಿ ತೂರಾಟದ ಪುಂಡಾಟಿಕೆ ನಡೆದಿರುವುದು ಅತ್ಯಂತ ಖಂಡನೀಯ ಹಾಗೂ ಹೇಯ ಕೃತ್ಯ. ಈ ಓಲೈಕೆ ದುರಾಡಳಿತದ, ತುಘಲಕ್ @INCKarnataka ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ. ಪೊಲೀಸರ… pic.twitter.com/31i9vaUzcN
— Vijayendra Yediyurappa (@BYVijayendra) February 20, 2026








