ಬೆಂಗಳೂರು: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಘಟನೆ ಸಂಬಂಧ ಪೋಸ್ಟ್ ಮಾಡಿದ್ದು, ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ ಮೊದಲ ಆದ್ಯತೆ. ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಎಂದಿದ್ದಾರೆ.
ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂಬುದಾಗಿ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ.
ಈಗಾಗಲೇ…
— Siddaramaiah (@siddaramaiah) February 20, 2026
ಬೆಂಗಳೂರಲ್ಲಿ ಪೇಯಿಂಗ್ ಗೆಸ್ಟ್ ಸಂಸ್ಥೆಗಳ ಪರಿಶೀಲನೆಗೆ ಜಂಟಿ ತಂಡ ರಚನೆ: GBA ಆಯುಕ್ತ ಡಿ.ಎಸ್ ರಮೇಶ್







