ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಪುನರ್ ರಚಿಸಿ ಆದೇಶಿಸಿದೆ. ಈ ಆದೇಶದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಮಿತ್ತ ಅಧ್ಯಕ್ಷರನ್ನಾಗಿ ಸಿಎಂ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ನೇಮಕ ಮಾಡಲಾಗಿದೆ.
ಇಂದು ಈ ಕುರಿತಂತೆ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರವನ್ನು ಹೊರಡಿಸಲಾಗಿದ್ದು, ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ಅಧಿನಿಯಮ, 2025ರ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ (2025 ರ ಕರ್ನಾಟಕ ಕಾಯ್ದೆ ಸಂಖ್ಯೆ: 36) ಪ್ರಕರಣ 09 ರ ಉಪ ಪ್ರಕರಣ (1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 181 ಬಿಬಿಎಸ್ 2025, ದಿನಾಂಕ:26-08-2025ರಂದು ರಚಿಸಲಾಗಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಪರಿಷ್ಕರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಗಿನಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಪುನರ್ ರಚಿಸಿ ಆದೇಶಿಸಿದೆ ಎಂದು ತಿಳಿಸಿದೆ.
ಇನ್ನೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್, ಪದನಿಮಿತ್ತ ಸದಸ್ಯರನ್ನಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವ ಬಿ.ಎಸ್ ಸುರೇಶ್ ಸೇರಿದಂತೆ ಇತರರನ್ನು ನೇಮಕ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಸದಸ್ಯ ಕಾರ್ಯದರ್ಶಿಯನ್ನಾಗಿ ಜಿಬಿಎಯ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರನ್ನು ನೇಮಿಸಲಾಗಿದೆ.

ಗಂಡ ಸತ್ತ ಒಂದು ವಾರದಲ್ಲೇ ಪತ್ನಿ ಹಿಂದೆ ಬಿದ್ದ ಪೊಲೀಸಪ್ಪ: ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ
ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ








