ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ರ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ, ಬಿ.ಎಸ್.ಡಬ್ಲೂö್ಯ, ಎಂ.ಎ, ಎಂ.ಕಾA, ಎಂ.ಎಸ್ಸಿ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂö್ಯ, ಎಂ.ಲಿಬ್.ಐ.ಎಸ್ಸಿ, ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್, ಎಕ್ಸ್ ಸರ್ವೀಸ್ ಮನ್ ವಿದ್ಯಾರ್ಥಿಗಳು, ಆಟೋ, ಕ್ಯಾಬ್ ಡ್ರೆöÊವರ್ಸ್ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರಲಿದೆ.
ಕೋವಿಡ್ನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಪೂರ್ಣಶುಲ್ಕ ವಿನಾಯಿತಿ ಇರಲಿದೆ. ಮಾ.30 ಪ್ರವೇಶಾತಿ ಪಡೆಯಲು ಕೊನೆಯ ದಿನ.
ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ನಲ್ಲಿ ಎಲ್ಲಾ ವಿವರಗಳನ್ನು ನೀಡಿದೆ. ವಿದ್ಯಾರ್ಥಿಗಳು ಅದರನ್ವಯ ಆನ್ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸುವಾಗ ತೊಂದರೆಯಾದಲ್ಲಿ ಆನ್-ಲೈನ್ ಸಹಾಯವಾಣಿ 8800335638, 8690544544 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗದ ಜಿಲ್ಲಾ ಕ್ರೀಡಾಂಗಣ ಹತ್ತಿರದ ಕರಾಮುವಿ ಪ್ರಾದೇಶಿಕ ಕೇಂದ್ರ(ಮೊ.9986696487) ಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಬಳ್ಳಾರಿಯ ಕರಾಮುವಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ನಾಗೇಶ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








