ಗದಗ : 5 ಲಕ್ಷ ರೂಪಾಯಿ ಕಮಿಷನ್ ಪಡೆಯುವಾಗ ಬಿಜೆಪಿ ಶಾಸಕ ಚಂದ್ರುಲ ಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಶಾಸಕ ಸೇರಿದಂತೆ ಮೂವರು ಲೋಕಾಯುಕ್ತ ವಶಕ್ಕೆ ಪಡೆದಿದ್ದಾರೆ.
ಸದ್ಯ ಎಲ್ಲರನ್ನೂ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆ ಇಲ್ಲಿ ಚಂದ್ರು ಲಮಾಣಿ ಅವರಿಗೆ ಸೇರಿದ ಒಂದು ಆಸ್ಪತ್ರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರನಿಂದ 5 ಲಕ್ಷ ಕಮಿಷನ್ ಪಡೆಯುವಾಗ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಳಕೆ ಬಿದ್ದಿದ್ದಾರೆ.
ರಸ್ತೆ ಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ, 1ಕೋಟಿ ರುಪಾಯಿ ಮೊತ್ತದ ಮಾಲ್ ನಿರ್ಮಾಣ ಮಾಡೋದಿತ್ತು. ಇದಕ್ಕೆ 12 ಪರ್ಸೆಂಟ್ ಕಮಿಷನ್ ಕೇಳಿದರು. ಇದೀಗ ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿ ನಡೆಸಿದೆ.ಶಾಸಕ ಚಂದ್ರು ಉಲಮಾಣಿ ಪಿಎ ಗಳಾದ ಮಂಜುನಾಥ್ ಮತ್ತು ಗುರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಧಾರವಾಡ ಲೋಕಾಯುಕ್ತ ಎಸ್ ಪಿ ಸಿದ್ದಲಿಂಗಪ್ಪ ನೇತ್ರತ್ವದಲ್ಲಿ ದಾಳಿ ನಡೆದಿದೆ








