ಮಂಡ್ಯ : ಮಾಜಿ ಶಾಸಕ ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಮಂಡ್ಯ ಜಿಲ್ಲೆಯ ಬೊಂತೆಕೊಪ್ಪಲು ಸಮೀಪ ನಿನ್ನೆ ರಾತ್ರಿ ಒಂದು ಅಪಘಾತ ನಡೆದಿದೆ.ಅದೃಷ್ಟವಶಾತ್ ಅಪಘಾತದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸುರೇಶ ಗೌಡ ಮಂಡ್ಯ ಜಿಲ್ಲೆಯ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ.
ಪಕ್ಷದ ಕಾರ್ಯಕರ್ತರ ಮದುವೆಗೆ ಸುರೇಶ್ ಗೌಡ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಭಾಗಶಹ ಕಾರು ಜಖಂಗೊಂಡಿದೆ. ಸುರೇಶ್ ಗೌಡ ಕೈಗೆ ಪೆಟ್ಟಾಗಿದ್ದು, ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಗನ್ ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುರೇಶ್ ಗೌಡರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.








