ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಮಾಕಳಿ ಬಳಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಮಾಕಳಿ ಬಳಿ ಇರುವ ಪರ್ಫ್ಯೂಮ್ ಗೋದಾಮಿನಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ.
ಇಂದು ಬೆಳಿಗ್ಗೆ 11:30 ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಕೆನ್ನಾಲಿಗೆಗೆ ಇಡೀ ಪರ್ಫ್ಯೂಮ್ ಗೋದಾಮು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ.








