ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.
ಇದೀಗ ಜೈಲು ಅಧಿಕಾರಿಗಳು ದಾಸಕ ಭೈರತಿ ಬಸವರಾಜ್ ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ್ದಾರೆ. 1864/2026 ಇದು ಬೈರತಿ ಬಸವರಾಜ್ ಅವರ ಕೈದಿ ನಂಬರ್ ಆಗಿದೆ. ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಭೈರತಿ ಬಸವರಾಜ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು ಕ್ವಾರಂಟೈನ್ ಸೆಲ್ ನಲ್ಲಿ ಇದ್ದಾರೆ. ಭೈರತಿ ಬಸವರಾಜ್ ಬೆಂಗಳೂರಿನ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ.








