ದಾವಣಗೆರೆ: ಜಿಲ್ಲೆಯಲ್ಲಿ ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ದಾವಣಗೆರೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿ ಸಿದ್ಧಾರ್ಥ್ ತ್ರಯಂಬಕೆ(30) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಖಾಸಗಿ ವೈದ್ಯಕೀಯ ಕಾಲೇಜಿನ ಇಂಟರ್ ನ್ಯಾಷನಲ್ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ಸಿದ್ಧಾರ್ಥ್ ತ್ರಯಂಬಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್ ನಿವಾಸಿಯಾಗಿರುವಂತ ಸಿದ್ಧಾರ್ಥ್ ತ್ರಯಂಬಕೆ. ಡರ್ಮಾಟಾಲಜಿ ವಿಭಾಗದಲ್ಲಿ ವೈದ್ಯಕೀಯ ವ್ಯಾಸಂಗವನ್ನು ಸಿದ್ಧಾರ್ಥ್ ಮಾಡುತ್ತಿದ್ದರು.
ನಿನ್ನೆ ಮಧ್ಯಾಹ್ನದಿಂದ ರೂಮ್ ಲಾಕ್ ಆಗಿದ್ದ ಹಿನ್ನಲೆಯಲ್ಲಿ ಅನುಮಾನಗೊಂಡು ಬಾಗಿಲು ಹೊಡೆದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದಾವಣಗೆರೆ ನಗರ ಬಡಾವಣೆಯ ಪೊಲೀಸರು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪದೇ ಪದೇ ‘ದೆಹಲಿ ಪ್ರವಾಸ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?








