ಬೆಂಗಳೂರು: ಉತ್ತರ ಜಿಲ್ಲೆಯ ನೆಲಮಂಗಲ ಬಳಿಯಲ್ಲಿ ಪರ್ಪ್ಯೂಮ್ ಗೋದಾಮಿಗೆ ಬೆಂಕಿ ಬಿದ್ದು, ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಜ್ವಾಲೆಯು ಧಗಧಗಿಸಿ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ.
ಬೆಂಗಳೂರಿನ ನೆಲಮಂಗಲ ರಸ್ತೆಯ ಮಾಕಳಿ ಬಳಿಯಲ್ಲಿನ ಪರ್ಪ್ಯೂಮ್ ಗೋದಾಮು ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ವ್ಯಾಪಿಸಿದ್ದು, ಭಯಾನಕ ಶಬ್ದ ಕೂಡ ಕೇಳಿ ಬರುತ್ತಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಅಗ್ನಿಯನ್ನು ಹತೋಟಿಗೆ ತರೋದಕ್ಕೆ ಹರಸಾಹಸ ಪಡುತ್ತಿದ್ದಾರೆ.
ಅಗ್ನಿ ಅವಘಡದ ವೇಳೆಯಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಅವರೆಲ್ಲರೂ ಬೆಂಕಿ ಅವಘಡದ ವೇಳೆಯಲ್ಲಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಆದರೇ ಮೂವರು ಕಾರ್ಮಿಕರಿಗೆ ಸುಟ್ಟ ಗಾಯವಾಗಿದ್ದು, ಅವರನ್ನು ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
SHOCKING: ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ








