ನವದೆಹಲಿ : ಅಫ್ಘಾನಿಸ್ತಾನದ ಭೂಪ್ರದೇಶದ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಗಳನ್ನ ಭಾರತ ಭಾನುವಾರ ಖಂಡಿಸಿದ್ದು, ಪವಿತ್ರ ರಂಜಾನ್ ತಿಂಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.
ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ದಾಳಿಗಳು “ಪಾಕಿಸ್ತಾನವು ತನ್ನ ಆಂತರಿಕ ವೈಫಲ್ಯಗಳನ್ನು ಹೊರಗೆಡವಲು ಮಾಡಿದ ಮತ್ತೊಂದು ಪ್ರಯತ್ನ” ಎಂದು ಹೇಳಿದರು ಮತ್ತು ಅಫ್ಘಾನಿಸ್ತಾನದ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ಸ್ವಾತಂತ್ರ್ಯಕ್ಕಾಗಿ ಭಾರತದ ಬೆಂಬಲವನ್ನ ಪುನರುಚ್ಚರಿಸಿದರು.
“ಪವಿತ್ರ ರಂಜಾನ್ ತಿಂಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಾಗರಿಕರ ಸಾವುನೋವುಗಳಿಗೆ ಕಾರಣವಾದ ಅಫ್ಘಾನ್ ಭೂಪ್ರದೇಶದ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತ ಬಲವಾಗಿ ಖಂಡಿಸುತ್ತದೆ. ಇದು ತನ್ನ ಆಂತರಿಕ ವೈಫಲ್ಯಗಳನ್ನ ಹೊರಗೆಡವಲು ಪಾಕಿಸ್ತಾನದ ಮತ್ತೊಂದು ಪ್ರಯತ್ನವಾಗಿದೆ. ಅಫ್ಘಾನಿಸ್ತಾನದ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ಸ್ವಾತಂತ್ರ್ಯಕ್ಕೆ ಭಾರತ ತನ್ನ ಬೆಂಬಲವನ್ನ ಪುನರುಚ್ಚರಿಸುತ್ತದೆ” ಎಂದು ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
BREAKING : ಟ್ರಂಪ್ ಮಾರ್ ಎ ಲಾಗೋದಲ್ಲಿ ನುಸುಳಲು ಯತ್ನಿಸಿದ ವ್ಯಕ್ತಿಯ ಗುಂಡಿಕ್ಕಿ ಕೊಂದ ರಹಸ್ಯ ಸೇವಾ ಏಜೆಂಟ್ಸ್
‘SBI’ನಿಂದ 50 ಲಕ್ಷ ರೂ. ಗೃಹ ಸಾಲ ಪಡೆದ್ರೆ ಎಷ್ಟು ‘EMI’ ಪಾವತಿಸ್ಬೇಕು ಗೊತ್ತಾ.? ಸಂಪೂರ್ಣ ಪಟ್ಟಿ ಇಲ್ಲಿದೆ!








