ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿನ್ನೆ ಮಂಡ್ಯ, ಮೈಸೂರು, ಕೊಗಡು, ಹಾಸನ ಜಿಲ್ಲೆಗಳ ಕೆಲವೆಡೆ ಅಕಾಲಿಕವಾಗಿ ಮಳೆ ಸುರಿದಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಈಗಾಗಲೇ ಬಿಸಿಲಿನ ತೀವ್ರತೆ ಶುರುವಾಗಿದೆ. ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನವು ವಾಡಿಕೆಗಿಂತ 3ರಿಂದ 5 ಡಿ.ಸೆ.ವರೆಗೆ ಹೆಚ್ಚಾಗಿದೆ. ಕಲಬುರಗಿಯಲ್ಲಿ ಭಾನುವಾರ 36.6 ಡಿ.ಸೆ.ಉಷ್ಣಾಂಶ ದಾಖಲಾಗಿದೆ.








