ಉಡುಪಿ : ಉಡುಪಿಯಲ್ಲಿ ವಾಹನಗಳ ದಟ್ಟಣೆ ನಡುವೆ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾನೆ. ಉಡುಪಿ ನಗರದ ಕಲ್ಸಂಕ ಜಂಕ್ಷನ್ ನಲ್ಲಿ ಈ ಒಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಸ್ಥಳೀಯ ಪೊಲೀಸರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ಒಂದು ತಪ್ಪಿದೆ.
ಗದಗ ಮೂಲದ ವ್ಯಕ್ತಿ ಒಬ್ಬ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಯುವಕನ ಹುಚ್ಚಾಟಕ್ಕೆ ಕೆಲ ಹೊತ್ತು ಭಯದ ವಾತಾವರಣ ನಿರ್ಮಾಣವಾಗಿತ್ತು. ಪೆಟ್ರೋಲ್ ಬಾಟಲ್ ಅನ್ನು ವ್ಯಕ್ತಿ ಕೈಯಲ್ಲಿ ಹಿಡಿದುಕೊಂಡು ಬಂದಿದ್ದ ಹಲವು ಬಾರಿ ಪೆಟ್ರೋಲ್ ಬಾಟಲಿಯನ್ನು ಸಂಚಾರಿ ಪೊಲೀಸರು ಕಸಿದುಕೊಂಡಿದ್ದರು.
ಮತ್ತೆ ಬಾಟಲಿಯಲ್ಲಿ ಪೆಟ್ರೋಲ್ ತಂದು ಯುವಕ ಮೈ ಮೇಲೆ ಸುರಿದುಕೊಂಡಿದ್ದಾನೆ. ಕುಟುಂಬ ಕಲಹದಿಂದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಯುವಕನನ್ನು ಉಡುಪಿ ನಗರ ಪೊಲೀಸ್ರು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ಸಮಯ ಪ್ರಜ್ಞೆಗೆ ಸಾರ್ವಜನಿಕರಿಂದ ಇದೀಗ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯುವಕನನ್ನು ಗದಗ ಜಿಲ್ಲೆಗೆ ಕಳುಹಿಸಲು ಪೊಲೀಸರು ವ್ಯವಸ್ಥೆ ಮಾಡಿದ್ದಾರೆ.








