ಬೆಂಗಳೂರು : ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಯತ್ನಿಸಿದ್ದ 8 ಜನ ಉಗ್ರರನ್ನು ನಿನ್ನೆ ದೆಹಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಕೂಡ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ನಾವೂ ಕೂಡಾ ರಾಜ್ಯದಲ್ಲಿ ಆಂತರಿಕವಾಗಿ ಅಲರ್ಟ್ ಮಾಡಿದ್ದೇವೆ. ನಮ್ಮ ಐಎಸ್‌ಡಿ ವಿಭಾಗಕ್ಕೆ ಅಲರ್ಟ್ ಮಾಡಿದ್ದೇವೆ. ಅಲ್ಲಿ ಬಂಧಿತ ಶಂಕಿತರಲ್ಲಿ ಬಾಂಗ್ಲಾದವ್ರೂ ಇದ್ದಾರೆ. ನಮ್ಮಲ್ಲಿ ಬಾಂಗ್ಲಾವಾಸಿಗಳ ಪತ್ತೆ ಮಾಡುವ ಕಾರ್ಯಾಚರಣೆ ನಡೀತಿದೆ. ಕಳೆದ ಒಂದು ತಿಂಗಳಿಂದ ಪ್ರತೀ ಸ್ಟೇಷನ್ ವ್ಯಾಪ್ತಿಯಲ್ಲಿ ಅಭಿಯಾನ ನಡೀತಿದೆ ಅಂತ ಪರಮೇಶ್ವರ್ ಹೇಳಿದ್ರು.








