Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

23/02/2026 3:59 PM

ಮಾರ್ಚ್.11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾಧ್ಯಂತ ಆರೋಗ್ಯ ಸೇವೆಯ ವ್ಯತ್ಯಯ ಸಾಧ್ಯತೆ

23/02/2026 3:56 PM

ವಿಬಿ ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು ಮನ್ ರೇಗಾ ಮರು ಜಾರಿಗೊಳಿಸಬೇಕು : ಸಿಎಂ ಸಿದ್ದರಾಮಯ್ಯ

23/02/2026 3:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾರ್ಚ್.11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾಧ್ಯಂತ ಆರೋಗ್ಯ ಸೇವೆಯ ವ್ಯತ್ಯಯ ಸಾಧ್ಯತೆ
KARNATAKA

ಮಾರ್ಚ್.11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾಧ್ಯಂತ ಆರೋಗ್ಯ ಸೇವೆಯ ವ್ಯತ್ಯಯ ಸಾಧ್ಯತೆ

By kannadanewsnow0923/02/2026 3:56 PM

ಬೆಂಗಳೂರು: ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಆರೋಗ್ಯ ಇಲಾಖೆಯ ವಿವಿಧ ವೃಂದಗಳ ಸಂಘಟನೆಗಳು ಒಗ್ಗೂಡಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿವೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

​ಹೋರಾಟದ ಹಂತಗಳು:

​ಫೆಬ್ರವರಿ 13ರಂದು ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಕೆಳಗಿನಂತೆ ಪ್ರತಿಭಟಿಸಲು ತೀರ್ಮಾನಿಸಲಾಗಿದೆ:

​ಮಾರ್ಚ್ 11 ರಿಂದ ಮಾರ್ಚ್ 15: ವೈದ್ಯರು ಮತ್ತು ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಅವಧಿಯಲ್ಲಿ ಹೊರರೋಗಿ ಸೇವೆ (OPD) ಇರುವುದಿಲ್ಲ, ಕೇವಲ ತುರ್ತು ಸೇವೆಗಳು ಮಾತ್ರ ಲಭ್ಯವಿರುತ್ತವೆ.

​ಮಾರ್ಚ್ 16 ರಿಂದ: ರಾಜ್ಯಾದ್ಯಂತ ಎಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ.

​ಪ್ರಮುಖ ಬೇಡಿಕೆಗಳು:

​ಆರೋಗ್ಯ ಇಲಾಖೆಯಲ್ಲಿನ ವ್ಯವಸ್ಥಿತ ಲೋಪದೋಷಗಳನ್ನು ಸರಿಪಡಿಸಲು ಸಂಘಟನೆಯು ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ:

​ಸರ್ಕಾರಿ ಆಸ್ಪತ್ರೆಗಳಿಗೆ ಸರಿಯಾದ ಸಮಯಕ್ಕೆ ಔಷಧಿ ಸರಬರಾಜು ಮಾಡುವುದು.

​1973ರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವುದು.

​ಕಳೆದ 5 ವರ್ಷಗಳಿಂದ ಬಾಕಿ ಇರುವ ಬಡ್ತಿ (Promotion) ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು.

​ಖಾಲಿ ಇರುವ ವೈದ್ಯರ ಮತ್ತು ಸಿಬ್ಬಂದಿಗಳ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವುದು.

​ಗುತ್ತಿಗೆ ಹಾಗೂ ಎನ್.ಹೆಚ್.ಎಂ (NHM) ನೌಕರರಿಗೆ ಸೇವಾ ಭದ್ರತೆ ಮತ್ತು ವೇತನ ಹೆಚ್ಚಳ ಒದಗಿಸುವುದು.

​ವರ್ಗಾವಣೆ ಪ್ರಕ್ರಿಯೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸುವುದು.

“ನಮ್ಮ ನ್ಯಾಯಯುತ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಮುಷ್ಕರದಿಂದಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸೇವೆಗೆ ಭಾರೀ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಪತ್ನಿ ನಿರುದ್ಯೋಗಿಯಲ್ಲ, ಪತಿ ಗಳಿಸುವ ಪ್ರತಿ ರೂಪಾಯಿಯಲ್ಲೂ ಆಕೆಯ ಬೆವರಿನ ಪಾಲಿದೆ: ಹೈಕೋರ್ಟ್

Share. Facebook Twitter LinkedIn WhatsApp Email

Related Posts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

23/02/2026 3:59 PM2 Mins Read

ವಿಬಿ ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು ಮನ್ ರೇಗಾ ಮರು ಜಾರಿಗೊಳಿಸಬೇಕು : ಸಿಎಂ ಸಿದ್ದರಾಮಯ್ಯ

23/02/2026 3:54 PM1 Min Read

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ: ಗೃಹ ಸಚಿವ ಡಾ.ಜಿ ಪರಮೇಶ್ವರ್

23/02/2026 3:36 PM2 Mins Read
Recent News

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

23/02/2026 3:59 PM

ಮಾರ್ಚ್.11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾಧ್ಯಂತ ಆರೋಗ್ಯ ಸೇವೆಯ ವ್ಯತ್ಯಯ ಸಾಧ್ಯತೆ

23/02/2026 3:56 PM

ವಿಬಿ ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು ಮನ್ ರೇಗಾ ಮರು ಜಾರಿಗೊಳಿಸಬೇಕು : ಸಿಎಂ ಸಿದ್ದರಾಮಯ್ಯ

23/02/2026 3:54 PM

ಪತ್ನಿ ನಿರುದ್ಯೋಗಿಯಲ್ಲ, ಪತಿ ಗಳಿಸುವ ಪ್ರತಿ ರೂಪಾಯಿಯಲ್ಲೂ ಆಕೆಯ ಬೆವರಿನ ಪಾಲಿದೆ: ಹೈಕೋರ್ಟ್

23/02/2026 3:42 PM
State News
KARNATAKA

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

By kannadanewsnow0923/02/2026 3:59 PM KARNATAKA 2 Mins Read

ಚಿಕ್ಕಬಳ್ಳಾಪುರ :ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ…

ಮಾರ್ಚ್.11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾಧ್ಯಂತ ಆರೋಗ್ಯ ಸೇವೆಯ ವ್ಯತ್ಯಯ ಸಾಧ್ಯತೆ

23/02/2026 3:56 PM

ವಿಬಿ ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು ಮನ್ ರೇಗಾ ಮರು ಜಾರಿಗೊಳಿಸಬೇಕು : ಸಿಎಂ ಸಿದ್ದರಾಮಯ್ಯ

23/02/2026 3:54 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ: ಗೃಹ ಸಚಿವ ಡಾ.ಜಿ ಪರಮೇಶ್ವರ್

23/02/2026 3:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.