ಶಿವಮೊಗ್ಗ : ಅಧಿಕಾರ ಹಂಚಿಕೆಯ ನಡುವೆ ರಾಜ್ಯದಲ್ಲಿ ಮೊದಲ ಬಾರಿ ಗೆದ್ದು ಶಾಸಕರಾಗಿದ್ದ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದು 5 ಶಾಸಕರಿಗೆ ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ಕೊಡಿ ಎಂದು ಪತ್ರ ಬರೆದಿದ್ದಾರೆ. ಇದೆ ವೇಳೆ ನನಗೆ ಸಿಎಂ ಆಗುವ ಆಸೆ ಇಲ್ಲ. ಸಚಿವ ಸ್ಥಾನ ಕೊಡಿ ಸಾಕು ಎಂದು ಶಾಸಕ ಬೀಳೋರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಿಸುವುದು ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದೇನೆ. ಸಿಎಂ ಆಗೋ ಅಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಕರ್ನಾಟಕ ರಾಜ್ಯದಲ್ಲಿ ಕೆಲವು ಹಿರಿಯ ನಾಯಕರು ಇದ್ದಾರೆ. ಕೆಲವರನ್ನು ಬದಲಾಯಿಸಿ ಯುವಕರಿಗೆ ಅವಕಾಶ ಕೊಡಬೇಕು. ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ. ನಮಗೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುವುದು ಬೇಡ. ಹೈಕಮಾಂಡ್ ನಾಯಕರು ಏನಾದರೂ ಒಂದು ನಿರ್ಧಾರ ತೆಗೆದುಕೊಳ್ಳಬೇಕು.
ನಾನು ಮೂರು ಬಾರಿ ಗೆದ್ದಿದ್ದೇನೆ ನಮಗೂ ಕೇಳುವ ಹಕ್ಕಿದೆ. ಮುಂದಿನ ಚುನಾವಣೆಗೆ ಎರಡು ವರ್ಷಗಳು ಮಾತ್ರ ಬಾಕಿ ಇದೆ. ಹಾಗಾಗಿ ನಮಗೂ ಒಂದು ಅವಕಾಶ ಮಾಡಿಕೊಡಬೇಕು. ಮುಂದಿನ ಚುನಾವಣೆ ದೃಷ್ಟಿಯಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಶಿವಮೊಗ್ಗದಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದರು.








