ದಾವಣಗೆರೆ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಚಮನ್ ಸಾಬ್ ಫಾತಿಮಾ ದಂಪತಿ ಪುತ್ರ ಮುಜಾಮಿಲ್ (15) ಎನ್ನುವ ಬಾಲಕ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ. ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ ಮುಜಮಿಲ್ 9ನೇ ತರಗತಿ ಓದುತ್ತಿದ್ದ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಬಾಲಕ ಮುಜಾಮಿಲ್ ಮನೆಗೆ ಬಂದಿದ್ದ.
ಇಂದು ಮುಂಜಾನೆ ಬಹಿರ್ದೆಸಿಗೆ ಹೋಗಿದ್ದಾಗ ಹೃದಯಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬಾಲಕ ಮುಜಾಮಿಲ್ ಸಾವನಪ್ಪಿದ್ದಾನೆ. ಮಗನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ.








