ಬೆಂಗಳೂರು : ಬೆಂಗಳೂರಿನಲ್ಲಿ ಮಾಸ್ಕ ಧರಿಸಿ ಎಟಿಎಂ ದರೋಡೆಗೆ ಯತ್ನಿಸಿದ್ದ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಎಟಿಎಂ ದರೋಡೆ ಯತ್ನ ನಡೆದಿತ್ತು.
ಎಟಿಎಂ ದರೋಡೆಗೆ ಯತ್ನಿಸಿದ್ದ ಆರೋಪಿ ರಾಜೇಂದ್ರ ಸಿಂಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಜೇಂದ್ರ ಸಿಂಗ್ ಬ್ಯಾಂಕ್ ಆಫ್ ಬರೋಡ ಎಟಿಎಂ ಗೆ ನುಗ್ಗಿದ್ದ. ಮಧ್ಯರಾತ್ರಿ ಎರಡು ಗಂಟೆಗೆ ಎಟಿಎಂ ಗೆ ನುಗ್ಗೆ ಮುಂದಾಗಿದ್ದ. ಶಟರ್ ಮುಚ್ಚಿ, ಸಿಸಿ ಕ್ಯಾಮೆರಾ ಮುಚ್ಚಿ ಕಳ್ಳತನಕ್ಕೆ ಯತ್ನಿಸಿದ್ದ. ಸದ್ಯ ರಾಜೇಂದ್ರ ಸಿಂಗ್ ಅನ್ನು ಬಂಧಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.








