Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೇಶಾದ್ಯಂತ ಬಾಲಕಿಯರಿಗೆ ಉಚಿತ ‘HPV ಲಸಿಕೆ’ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!

24/02/2026 3:00 PM

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ
KARNATAKA

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

By kannadanewsnow0924/02/2026 2:36 PM

ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್‌17ರವರೆಗೆ ಜಿಲ್ಲೆಯ 41ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಶಿವಮೊಗ್ಗದಲ್ಲಿ 17, ಭದ್ರಾವತಿಯಲ್ಲಿ 06, ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ತಲಾ 03, ಸಾಗರ ಮತ್ತು ಶಿಕಾರಿಪುರದಲ್ಲಿ ತಲಾ 05 ಮತ್ತು ಸೊರಬದಲ್ಲಿ 02 ಪರೀಕ್ಷಾ ಕೇಂದ್ರಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 41ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 19009ವಿದ್ಯಾರ್ಥಿಗಳು ಸದರಿ ಪರೀಕ್ಷೆಗೆ ಹಾಜರಾಗಲಿದ್ದಾರೆ. 7188ಬಾಲಕರು ಹಾಗೂ 10567ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು  17,755ರೆಗ್ಯೂಲರ್‌ವಿದ್ಯಾರ್ಥಿಗಳು, 871 ಪುನರಾವರ್ತಿತ ಅಭ್ಯರ್ಥಿಗಳು, 380 ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ಸುಧಾರಣೆಗಾಗಿ 03ವಿದ್ಯಾರ್ಥಿಗಳು  ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕೆಗಳನ್ನು ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮೂರು ಜನರ ಅಧಿಕಾರಿಗಳ 12 ತಂಡವನ್ನು ರಚಿಸಲಾಗಿದ್ದು, ಅಗತ್ಯ ಪೊಲೀಸ್‌ಭದ್ರತೆ ಒದಗಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಭಾರತೀಯ ನ್ಯಾಯಸಂಹಿತೆ 163ಪ್ರಕಾರ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್‌ವ್ಯತ್ಯಯವಾಗದಂತೆ ನೋಡಿಕೊಳ್ಳಲು ಮೆಸ್ಕಾಂ ಅಧೀಕ್ಷಕ ಅಭಿಯಂತರರಿಗೆ ಸೂಚಿಸಲಾಗಿದೆ. ಅಲ್ಲದೇ ವಿಶೇಷವಾಗಿ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಉಚಿತ ಬಸ್‌ಸೌಲಭ್ಯವನ್ನು ಒದಗಿಸಲಾಗಿದ್ದು, ಬಸ್‌ಸಂಚರಿಸುವ ಮಾರ್ಗದಲ್ಲಿನ ವಿದ್ಯಾರ್ಥಿಗಳು ತಮ್ಮ ಪರೀಕ್ಷಾಕೇಂದ್ರದ ಪ್ರವೇಶಪತ್ರವನ್ನು ತೋರಿಸಿ, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದರು.

ಪರೀಕ್ಷಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೇ ಆತಂಕವಿಲ್ಲದೇ ಸಮಾಧಾನಚಿತ್ತರಾಗಿ ಪರೀಕ್ಷೆಯಲ್ಲಿ ಭಾಗವಹಿಸಿ, ಈವರೆಗಿನ ಅವಧಿಯಲ್ಲಿ ತಾವು ಓದಿದ ವಿಷಯವನ್ನು ಅರಿತು ಸಕಾಲಿಕವಾಗಿ ಉತ್ತರಿಸುವ ಮೂಲಕ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗುವಂತೆ ಸೂಚಿಸಿದ ಅವರು, ಕಲಿಕೆಯಿಂದ ಹಿಂದುಳಿದ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಈಗಾಗಲೇ ವಿಶೇಷ ತರಗತಿಗಳ ಮೂಲಕ ಬೋಧನೆ ನಡೆಸಲಾಗಿದೆ ಎಂದವರು ನುಡಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ಅವರು ಮಾತನಾಡಿ, ಪೋಷಕರ ಕೋರಿಕೆಯ ಮೇರೆಗೆ ಪ್ರತಿನಿತ್ಯ ಸಂಜೆ ವಿಶೇಷ ಕಲಿಕಾ ತರಗತಿಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯಾವುದೇ ಒತ್ತಡವಿಲ್ಲದೆ ಜಿಲ್ಲೆಗೆ ಉತ್ತಮ ಫಲಿತಾಂಶ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದಾರೆ. ಇದರಿಂದಾಗಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರುವ ನಿರೀಕ್ಷೆ ಇದೆ ಎಂದರು.

ಜಿಲ್ಲೆಯ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜದಲ್ಲಿ ಉತ್ತಮ ಸ್ಥಾನಮಾನ ಹೊಂದುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದ ಅವರು, ಪ್ರತಿ ವಿದ್ಯಾರ್ಥಿಯ ಕಲಿಕೆಯಲ್ಲಿ ಹಿನ್ನೆಡೆಗೆ ಇರುವ ಸೂಕ್ಷ್ಮ ಕಾರಣಗಳನ್ನು ಗಮನಿಸಿ ಅಗತ್ಯ ಕ್ರಮವಹಿಸಲಾಗಿದೆ. ಅಲ್ಲದೇ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯಗೊಳ್ಳುವಂತೆ ಸಿ.ಇ.ಟಿ. ತರಬೇತಿ ತರಗತಿಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಯಾವುದೇ ವಿದ್ಯಾರ್ಥಿ ಅನುತ್ತೀರ್ಣರಾಗದಂತೆ ನೋಡಿಕೊಳ್ಳುವ ಸದಾಶಯ ಹೊಂದಲಾಗಿದೆ ಎಂದರು.

ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪೋಷಕರು ತಮ್ಮ ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಬೇಕು ಎಂದ ಅವರು, ಸಾಮಾಜಿಕ ಜಾಲತಾಣಗಳನ್ನು ಸೋರಿಕೆಯಾಗುವ ಪ್ರಶ್ನೆಪತ್ರಿಕೆಗಳು ನಕಲಿ ಹಾಗೂ ನಂಬಲರ್ಹವಾದುವುಗಳಲ್ಲ. ಇದರಿಂದಾಗಿ ವಿಚಲಿತರಾಗದಂತೆ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್‌ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ ಅವರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM2 Mins Read

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

24/02/2026 2:06 PM1 Min Read

BIG NEWS :`SSLC’ ಪಾಸಾದವರಿಗೆ ಗುಡ್ ನ್ಯೂಸ್ : ನೀವು ಈ ಟಾಪ್ 10 `ಸರ್ಕಾರಿ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಬಹುದು !

24/02/2026 1:59 PM2 Mins Read
Recent News

BREAKING : ದೇಶಾದ್ಯಂತ ಬಾಲಕಿಯರಿಗೆ ಉಚಿತ ‘HPV ಲಸಿಕೆ’ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!

24/02/2026 3:00 PM

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

24/02/2026 2:06 PM
State News
KARNATAKA

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

By kannadanewsnow0924/02/2026 2:36 PM KARNATAKA 2 Mins Read

ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್‌17ರವರೆಗೆ ಜಿಲ್ಲೆಯ 41ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು,…

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

24/02/2026 2:06 PM

BIG NEWS :`SSLC’ ಪಾಸಾದವರಿಗೆ ಗುಡ್ ನ್ಯೂಸ್ : ನೀವು ಈ ಟಾಪ್ 10 `ಸರ್ಕಾರಿ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಬಹುದು !

24/02/2026 1:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.