Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಬ್ ಬೆದರಿಕೆ ; ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಸ್ಥಳಾಂತರ

24/02/2026 7:58 PM

Mayank Pawar Dies : ಕೇವಲ 37ನೇ ವಯಸ್ಸಿಗೆ ಉಸಿರು ಚೆಲ್ಲಿದ ನಟ-ಮಾಡೆಲ್ ‘ಮಯಾಂಕ್ ಪವಾರ್’

24/02/2026 7:45 PM

ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

24/02/2026 7:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ
KARNATAKA

ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

By kannadanewsnow0924/02/2026 7:43 PM

ಬೆಂಗಳೂರು: ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತರ ಕುಟುಂಬಕ್ಕೆ 15 ಲಕ್ಷವನ್ನು ಸರ್ಕಾರದಿಂದ ಪರಿಹಾರವಾಗಿ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದಿದ್ದಾರೆ.

ಕೊಲೆಯಲ್ಲಿ ಭಾಗಿಯಾದವರು ಇನ್ನೂ ಚಿಕ್ಕಪ್ರಾಯದ ಹುಡುಗರು ಎಂದು ಕೇಳಿ ದಿಗ್ಭ್ರಮೆಯಾಯಿತು. ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಂಡು, ಕುಟುಂಬಕ್ಕೆ ಆಸರೆಯಾಗಬೇಕಿದ್ದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ, ಹೀಗೆ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ ಎಂದು ತಿಳಿಸಿದ್ದಾರೆ.

ಕೊಲೆಯ ಹಿಂದಿನ ಉದ್ದೇಶವೇನೇ ಇರಲಿ, ಕೊಲೆಗೈದವರು ಯಾರೇ ಆಗಿರಲಿ, ಅವರನ್ನು ಕಾನೂನಿನ ಮೂಲಕ ಹೆಡೆಮುರಿ ಕಟ್ಟಿ, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ಎಸಗುವ ಮುನ್ನ ನೂರು ಬಾರಿ ಯೋಚಿಸಬೇಕಾದಂತಹ ಸ್ಥಿತಿ ನಿರ್ಮಾಣ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ.

ಬಾಲ್ಯದಲ್ಲೇ ದ್ವೇಷ, ಹಿಂಸೆ, ಅಪರಾಧ ಕೃತ್ಯಗಳ ದುರ್ಬುದ್ದಿ ಬೆಳೆಸಿಕೊಳ್ಳುವುದು ಅತ್ಯಂತ ಅಪಾಯಕಾರಿ. ಇಂತಹ ಮನಸ್ಥಿತಿಯಿರುವವರು ದುಶ್ಚಟಗಳಿಗೆ ದಾಸರಾದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಪೋಷಕರು ಸಹ ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು, ಮಕ್ಕಳು ಹಾದಿ ತಪ್ಪಿದ್ದರೆ ತಿದ್ದಿ ಬುದ್ದಿ ಹೇಳಬೇಕು.
ಶಾಲೆಯ ಸುತ್ತಮುತ್ತ ಕಾನೂನು ಬಾಹಿರ ಕೃತ್ಯಗಳು ನಡೆಯದಂತೆ ಆಡಳಿತ ಮಂಡಳಿ ನಿಗಾ ವಹಿಸಬೇಕು. ಅಗತ್ಯಬಿದ್ದರೆ ಪೊಲೀಸರ ನೆರವನ್ನು ಪಡೆಯಬೇಕು.

ಮಗನನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬವನ್ನು ಸಂತೈಸುವ ಉದ್ದೇಶದಿಂದ ಮೃತನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ಪರಿಹಾರವನ್ನು ನೀಡಲಾಗುವುದು. ಈ ದುಷ್ಕೃತ್ಯ ಎಸಗಿದ ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳುವ ವಾಗ್ದಾನವನ್ನು ಕೂಡ ಆ ನೊಂದ ಕುಟುಂಬಕ್ಕೆ ಈ ವೇಳೆ ನೀಡುತ್ತಿದ್ದೇನೆ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ, ಶಾಂತಿ – ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ. ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಕೃತ್ಯದಲ್ಲಿ ತೊಡಗುವವರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ.

ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ…

— Siddaramaiah (@siddaramaiah) February 24, 2026

Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

24/02/2026 6:46 PM2 Mins Read

ನಿಮ್ಮ ಮನೆಯ ವಾಸ್ತು ಸಮಸ್ಯೆ ಸರಿ ಪಡಿಸೋದಕ್ಕೆ ಜಸ್ಟ್ ಹೀಗೆ ಮಾಡಿ ಸಾಕು

24/02/2026 6:46 PM3 Mins Read

‘ಸಾಗರ ACF’ ಅವಾಚ್ಯ ಶಬ್ದಗಳಿಂದ ‘ಜಾತಿ ನಿಂದನೆ’: ರೈತನಿಂದ ‘DFO’ಗೆ ದೂರು

24/02/2026 6:30 PM3 Mins Read
Recent News

BREAKING : ಬಾಂಬ್ ಬೆದರಿಕೆ ; ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಸ್ಥಳಾಂತರ

24/02/2026 7:58 PM

Mayank Pawar Dies : ಕೇವಲ 37ನೇ ವಯಸ್ಸಿಗೆ ಉಸಿರು ಚೆಲ್ಲಿದ ನಟ-ಮಾಡೆಲ್ ‘ಮಯಾಂಕ್ ಪವಾರ್’

24/02/2026 7:45 PM

ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

24/02/2026 7:43 PM

ಅಭಿಮಾನಿಗಳಿಗೆ ಐಸಿಸಿ ಗೂಗ್ಲಿ ; ಸ್ಥಳ ನಿಗದಿಗೂ ಮುನ್ನ ಸೆಮಿಫೈನಲ್, ಫೈನಲ್ ಪಂದ್ಯಗಳ ಟಿಕೆಟ್ ಮಾರಾಟ

24/02/2026 7:21 PM
State News
KARNATAKA

ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

By kannadanewsnow0924/02/2026 7:43 PM KARNATAKA 2 Mins Read

ಬೆಂಗಳೂರು: ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತರ ಕುಟುಂಬಕ್ಕೆ 15 ಲಕ್ಷವನ್ನು…

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

24/02/2026 6:46 PM

ನಿಮ್ಮ ಮನೆಯ ವಾಸ್ತು ಸಮಸ್ಯೆ ಸರಿ ಪಡಿಸೋದಕ್ಕೆ ಜಸ್ಟ್ ಹೀಗೆ ಮಾಡಿ ಸಾಕು

24/02/2026 6:46 PM

‘ಸಾಗರ ACF’ ಅವಾಚ್ಯ ಶಬ್ದಗಳಿಂದ ‘ಜಾತಿ ನಿಂದನೆ’: ರೈತನಿಂದ ‘DFO’ಗೆ ದೂರು

24/02/2026 6:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.