ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣದ ವೇಳೆಯಲ್ಲಿ ಕಾರ್ಮಿಕರಿಬ್ಬದು ಬಿದ್ದು ಸಾವನ್ನಪ್ಪಿರುವಂತ ಧಾರುಣ ಘಟನೆ ನಡೆದಿದೆ.
ಹುಬ್ಬಳ್ಳಿಯ ಕೆ ಎಲ್ ಇ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಮೃತ ಕಾರ್ಮಿಕರನ್ನು ಕುಂದಗೋಳ ತಾಲ್ಲೂಕಿನ ಹೊತ್ತಿಗೇರಿಯ ಮಲ್ಲೇಶ್(45) ಹಾಗೂ ಅಣ್ಣಿಗೇರಿಯ ವರ್ಷ ಅಕ್ಬರ ಸಂಗಟಿ(36) ಎಂಬುದಾಗಿ ಗುರುತಿಸಲಾಗಿದೆ.
ಮಂಗಳವಾರ ಈ ಘಟನೆ ನಡೆದಿದ್ದು, ನಿರ್ಮಾಣ ಕಾಮಗಾರಿ ವೇಳೆ ಸಮತೋಲನ ತಪ್ಪಿ ಕಾರ್ಮಿಕರು ಎತ್ತರದಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಿರ್ಮಾಣ ಕಾರ್ಯದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.
ಈ ದುರ್ಘಟನೆಯಿಂದ ಕಾಲೇಜು ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.








