ಯಾದಗಿರಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ವಿರುದ್ಧ ಅವಹೇಳನಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ಘಟನೆಯ ಹಿನ್ನೆಲೆ
ಫೆಬ್ರುವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳಲ್ಲ. ಜವಾಹರ್ಲಾಲ್ ನೆಹರೂರನ್ನ ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಕಾಶ್ಮೀರಕ್ಕೆ 370 ಕೊಟ್ಟಿದ್ದು ಯಾಕಂದ್ರೆ ಫಾರೂಕ್ ಅಬ್ದುಲ್ಲ ಲಿಂಕ್ ಇದೆ, ಫಾರೂಕ್ ಅಬ್ದುಲ್ಲಗೆ ಜವಾಹರಲಾಲ್ ನೆಹರುಗೆ ಲಿಂಕ್ ಇತ್ತು. ಅದಕ್ಕೆ ರಾಹುಲ್ ಗಾಂಧಿ ಮತ್ತು ಓಮರ್ ಅಬ್ದುಲ್ಲ ಒಂದೇ ತರಹ ಇದ್ದಾರೆ. ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ರಾಹುಲ್ ಸೇಮ್ ಇದ್ದಾರೆ ಇಬ್ಬರೂ ಒಂದೇ ಪ್ರೋಡಕ್ಷನ್ ಇದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜವಾಹರ್ ಲಾಲ್ ನೆಹರು ಈ ಕೆಲಸ ಬಿಟ್ಟು ಬೇರೆ ಏನು ಮಾಡಿಲ್ಲ. ಮೌಂಟ್ ಬ್ಯಾಟನ್ ಪತ್ನಿ ಜೊತೆ ಸೇರಿ ಇದೇ ಕೆಲಸ ಮಾಡಿದ್ದಾನೆ. ಇವರೆಲ್ಲರೂ ದೇಶದ ಸ್ವತಂತ್ರಕ್ಕಾಗಿ ಉಪವಾಸ ಮಾಡುತ್ತಿರಲಿಲ್ಲ. ಕೊಲ್ಕತ್ತಾದಿಂದ 555 ಸಿಗರೇಟ್ ತರಿಸಿಕೊಂಡು ಸೇದುತ್ತಿದ್ದರು. ಗಾಂಧೀ ಚರಕ ತಿರುಗಿಸಿದ್ದರಿಂದ ಭಾರತಕ್ಕೆ ಸ್ವತಂತ್ರ ಸಿಕ್ಕಿತ? ನಾನು ಚರಕ ತಿರುಗಿಸುತ್ತೇನೆ ನಾಳೆ ರಾಜ್ಯದ ಸಿಎಂ ಆಗುತ್ತೇನ? ಭಾರತದಲ್ಲಿರುವ ಮುಸ್ಲಿಮರು ಒಂದೇ ಮಾತರಂ ಹೇಳಬೇಕು. ಇಲ್ಲದಿದ್ದರೆ ಗಾಂಧೀ ಕೊಟ್ಟ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದೆ.
ಪೊಲೀಸ್ ಕ್ರಮ
ಗುರುಮಠಕಲ್ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 196: ವಿವಿಧ ಗುಂಪುಗಳ ನಡುವೆ ದ್ವೇಷ ಉಂಟುಮಾಡುವುದು. ಸೆಕ್ಷನ್ 299: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು. ಸೆಕ್ಷನ್ 302, 352, 353: ಸಾರ್ವಜನಿಕ ಶಾಂತಿಗೆ ಭಂಗ ಹಾಗೂ ಇತರ ಕೃತ್ಯಗಳು.ಸದ್ಯ ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದು, ಮುಂದಿನ ಕಾನೂನು ಕ್ರಮಕ್ಕೆ ಸಜ್ಜಾಗಿದ್ದಾರೆ.








